ಬಂಟ್ವಾಳ :ತುಂಬೆ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಜಯಂತಿ ಕೇಶವ ಹಾಗೂ ಉಪಾಧ್ಯಕ್ಷ ಗಣೇಶ್ ಸಾಲಿಯಾನ್ ಅವರ ಪದಗ್ರಹಣ ಸಮಾರಂಭ ಹಾಗೂ ತುಂಬೆ ನಾಗರಿಕ ಅಭಿನಂದನ ಸಮಿತಿಯ ವತಿಯಿಂದ ಗ್ರಾ ಪಂ ನಿಕಟ ಪೂರ್ವ ಅಧ್ಯಕ್ಷ ಪ್ರವೀಣ್ ಬಿ ತುಂಬೆ ಅವರಿಗೆ ಅಭಿನಂದನ ಕಾರ್ಯಕ್ರಮವು ಅ 23ರಂದು ಬುಧವಾರ ತುಂಬೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತ ಅಧಿಕಾರಿ ರೆl ಫಾl ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ ಮಾತನಾಡಿ ತಮ್ಮ ಜವಾಬ್ದಾರಿಯನ್ನು ಅರಿತು,ಜನರ ಅಶೋತ್ತರಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದಾಗಲೇ ಜನತೆ ತಮ್ಮ ಪ್ರತಿನಿಧಿಗಳನ್ನು ನೆನಪಿಟ್ಟುಕೊಳ್ಳುವುದಕ್ಕೆ ಸಾಧ್ಯ ಈ ನಿಟ್ಟಿನಲ್ಲಿ ಪ್ರವೀಣ್ ತುಂಬೆ ಅವರು ತನ್ನ ಅಧ್ಯಕ್ಷ ಅವಧಿಯಲ್ಲಿ ವಿಶೇಷ ಸಾಧನೆ ಮಾಡಿ ಸಮಾಜಕ್ಕೆ ದುಡಿದಿದ್ದಾರೆ ಎಂದರು.
ನಿರ್ಗಮನ ಅಧ್ಯಕ್ಷ ಪ್ರವೀಣ್ ತುಂಬೆ ಮಾತನಾಡಿ ಕಠಿಣ ಪರಿಸ್ಥಿತಿಯಲ್ಲಿ ನನಗೆ ಗ್ರಾಮದ ಜನತೆ ಸಾಕಷ್ಟು ಮಂದಿ ದೈರ್ಯ ತುಂಬಿ ಕೈ ಹಿಡಿದು ಮುನ್ನಡೆಸಿದ ಪರಿಣಾಮ ಈ
ಹಂತಕ್ಕೆ ಬೆಲೆಯನ್ನು ಸಾಧ್ಯವಾಯಿತು ತನ್ನ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಂಜವ, ತುಂಬೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ ಎನ್ ಗಂಗಾಧರ್ ಆಳ್ವ, ಪಿಡಿಓ ಚಂದ್ರಾವತಿ ಶುಭ ಹಾರೈಸಿದರು. ನೂತನ ಅಧ್ಯಕ್ಷರು,ಉಪಾಧ್ಯಕ್ಷರನ್ನು ಗ್ರಾಮಸ್ಥರು ಅಭಿನಂದಿಸಿದರು, ನಿರ್ಗಮನ ಅಧ್ಯಕ್ಷ ಪ್ರವೀಣ್ ಬಿ ತುಂಬೆ ಅವರನ್ನು ಸನ್ಮಾನಿಸಲಾಯಿತು.
ಉದಯಕುಮಾರ್ ಜ್ಯೋತಿಗುಡ್ಡೆ ಸನ್ಮಾನ ಪಾತ್ರ ವಾಚಿಸಿದರು, ನಾಗರಿಕ ಅಭಿನಂದನ ಸಮಿತಿಯ ಸದಾಶಿವ ಡಿ ತುಂಬೆ ಸ್ವಾಗತಿಸಿ, ಉಪಾಧ್ಯಕ್ಷ ಗಣೇಶ್ ಸಾಲಿಯನ್ ವಂದಿಸಿದರು,ನಿವೃತ್ತಿ ಪ್ರಾಧ್ಯಾಪಕ ರಾಮಚಂದ್ರ ರಾವ್ ಕಾರ್ಯಕ್ರಮ ನಿರ್ವಹಿಸಿದರು.















