ಪೊಳಲಿ: ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದಲ್ಲಿ ಗೋಶಾಲೆ ನಿರ್ಮಾಣಕ್ಕೆ ಸಿದ್ಧತೆ

Coastal Bulletin
ಪೊಳಲಿ: ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದಲ್ಲಿ ಗೋಶಾಲೆ ನಿರ್ಮಾಣಕ್ಕೆ ಸಿದ್ಧತೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವತಿಯಿಂದ ಫಲ್ಗುಣಿ ನದಿ ತಟದ ಪಡ್ಯಾಪುವಿನ 15 ಎಕರೆ ಪ್ರದೇಶದಲ್ಲಿ ₹1.50 ಕೋಟಿ ವೆಚ್ಚದಲ್ಲಿ ಗೋಶಾಲೆ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ. ಕಾಮಗಾರಿಯ ಭೂಮಿಪೂಜೆಯನ್ನು ಶೀಘ್ರದಲ್ಲೇ ನೆರವೇರಿಸಲು ಉದ್ದೇಶಿಸಲಾಗಿದೆ.

ಈ ಯೋಜನೆಗೆ ಸಂಬಂಧಿಸಿದಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗೋಶಾಲೆಯ ನಿರ್ಮಾಣ ಕಾಮಗಾರಿಯ ನೀಲನಕ್ಷೆಯನ್ನು ಪರಿಶೀಲಿಸಿ, ಕಾಮಗಾರಿ ಆರಂಭಿಸುವ ಕುರಿತು ಚರ್ಚಿಸಲಾಯಿತು.

ಯೋಜನೆಯಡಿ ಗೋಶಾಲೆಯೊಂದಿಗೆ ಸ್ನಾನಘಟ್ಟ, ಕಾರ್ಮಿಕರಿಗೆ ವಸತಿ ವ್ಯವಸ್ಥೆ

ಹಾಗೂ ಗೋದಾಮು ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಪ್ಪಂದವೂ ಅಂತಿಮಗೊಂಡಿದೆ. ಕಾಮಗಾರಿ ಆರಂಭಿಸಲು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ.

ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಕಾರ್ಯನಿರ್ವಹಣಾಧಿಕಾರಿ ಚಂದ್ರಮೋಹನ್, ಇಂಜಿನಿಯರ್ ಲಕ್ಷ್ಮಣ್ ಪೂಜಾರಿ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು

Leave a Comment