Coastal Bulletin

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಸಮೀಪದ ಬಸ್ತಿಪಡ್ಪು ಎಂಬಲ್ಲಿ ಕೇಂದ್ರ ಮಾಜಿ ಬಿ. ಜನಾರ್ಧನ ಪೂಜಾರಿ ಇವರ ಮನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ಬಿಜೆಪಿ ಮುಖಂಡರ ನಿಯೋಗ ಸೋಮವಾರ ಭೇಟಿ ನೀಡಿ ಮಾತುಕತೆ ನಡೆಸಿದರು.

ಗಣರಾಜ್ಯೋತ್ಸವದ ಪರೇಡ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧ ಚಿತ್ರ ನಿರಾಕರಣೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ವಿರುದ್ಧ ಕೇರಳ ಸರಕಾರವು ನೀಡಿರುವ ತಪ್ಪು ಮಾಹಿತಿ ಮತ್ತು ಕಾಂಗ್ರೆಸ್ ನಡೆಸುತ್ತಿರುವ ಅಪಪ್ರಚಾರ

ಬಗ್ಗೆ ಜನಾರ್ದನ ಪೂಜಾರಿ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಅವರು ತಿಳಿಸಿದರು. ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಮೂಡ ಅಧ್ಯಕ್ಷ ರವಿಶಂಕರ್, ಸತೀಶ್ ಕುಂಪಲ ಇದ್ದರು

Leave a Comment