ಉಡುಪಿ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಹಿರ್ಗಾನ ಶೇ.100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ,14 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ನಾಗಶ್ರೀ 612 ಅಂಕ
ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಚರಿಷ್ಮಾ ಶೆಟ್ಟಿ ಹಾಗೂ ಧಾರಿಣಿ ನಾಯಕ್ 610 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಹಂಚಿಕೊಂಡಿದ್ದಾರೆ.














