ಉಡುಪಿ : ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್,ಘಟನೆಯ ವಿಡಿಯೋ ನೋಡಿ ಬೆಚ್ಚಿಬಿದ್ದ ಜನತೆ!

Coastal Bulletin
ಉಡುಪಿ : ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್,ಘಟನೆಯ ವಿಡಿಯೋ ನೋಡಿ ಬೆಚ್ಚಿಬಿದ್ದ ಜನತೆ!

ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಉಡುಪಿ-ಮಣಿಪಾಲ ರಸ್ತೆಯ ನಡು ರಸ್ತೆಯಲ್ಲಿಯೇ ಗ್ಯಾಂಗ್‌ ವಾ‌ರ್ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ವಿಡಿಯೋ ಲಿಂಕ್

https://youtu.be/WkbBCsthp4g?si=eJxt38LM7NuXeh2g

ಮೇ 18ರಂದು ಈ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಮೇ 20ರಂದು ಪ್ರಕರಣ ದಾಖಲಿಸಿಕೊಂಡಿದ್ದರು.

ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಕಾಪುವಿನ ಗರುಡ

ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಟ್ರ್ಯಾಗರ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Leave a Comment