Coastal Bulletin

ಬಂಟ್ವಾಳ : ಶ್ರೀರಾಮ ಪದವಿ ಕಾಲೇಜು ಇದರ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ವಿದ್ಯಾರ್ಥಿಗಳ ಪ್ರತಿಭಾ ದಿನೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆ 24ರಂದು ಅಜಿತಕುಮಾರ ಸಭಾಭವನದಲ್ಲಿ ನಡೆಯಿತು.

ಉದ್ಘಾಟಕರಾಗಿ ಆಗಮಿಸಿದ ತುಳು ಚಿತ್ರರಂಗ ಹಾಗೂ ರಂಗಭೂಮಿ ಕಲಾವಿದ ಭೋಜರಾಜ ವಾಮಂಜೂರು ದೀಪ ಬೆಳಗಿಸಿ, ತಮ್ಮ ಬಾಲ್ಯದ ಸವಿನೆನಪುಗಳನ್ನು ಮೆಲುಕುಹಾಕಿ ವಿದ್ಯಾರ್ಥಿಗಳಿಗೆ ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಹೇಗೆ ಯಶಸ್ಸಿನ ಗುರಿಯನ್ನು ತಲುಪಬಹುದು ಎಂಬುದನ್ನು ತಿಳಿಸಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿದ ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದಅಧ್ಯಕ್ಷ ಪ್ರಭಾಕರ ಭಟ್ಕಲ್ಲಡ್ಕವಹಿಸಿ ವಿದ್ಯಾರ್ಥಿಗಳ ಸಾಂಸ್ಕೃತಿಕಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾಕಾಲೇಜಿನ ಪ್ರಾಚಾರ್ಯಡಾ| ಸುಭಾಷಿಣಿ ಶ್ರೀವತ್ಸ,ತುಳು ಕನ್ನಡಚಿತ್ರರಂಗ ನಾಯಕನಟ ಪೃಥ್ವಿಅಂಬರ್, ತುಳು ಚಿತ್ರರಂಗದ ನಾಯಕನಟ ವಿನೀತ್,

ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ರಮೇಶ್ ಕೆ.ಕಾರ್ಯಕ್ರಮಕ್ಕೆ ಆಗಮಿಸಿ ಪ್ರದೀಪ್ತ ಸಾಂಸ್ಕೃತಿಕ ಸಂಘ,ಪ್ರತಾಪಕ್ರೀಡಾ ಸಂಘ, ಅಂತರ್ಕಾಲೇಜು ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರದ ಜೊತೆಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು ಹಾಗೂ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದಎಲ್ಲಾ ವಿದ್ಯಾರ್ಥಿ ಗಳನ್ನು ಗುರುತಿಸಿ ಪ್ರೋತ್ಸಾಹಿಸಿದರು.

ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಡಾ| ಕಮಲಾ ಪ್ರಭಾಕರ ಭಟ್, ಪದವಿ ಕಾಲೇಜು ಪ್ರಾಚಾರ್ಯರಾದ ಕೃಷ್ಣಪ್ರಸಾದ ಕಾಯರ್ಕಟ್ಟೆ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಸ್ವರ್ಣಲಕ್ಷ್ಮೀ ಸ್ವಾಗತಿಸಿ, ಪ್ರತೀಕಾ ವಂದಿಸಿ, ಕಾರ್ಯಕ್ರಮವನ್ನು ಕೀರ್ತಿ ಮತ್ತು ಜೈದೀಪ ನಿರೂಪಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Leave a Comment