breaking news

ಬಂಟ್ವಾಳ: ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ (ನಿ)   ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿಂದ ಸಾಧನಾ ಪುರಸ್ಕಾರ.

Coastal Bulletin
ಬಂಟ್ವಾಳ: ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ (ನಿ)   ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿಂದ ಸಾಧನಾ ಪುರಸ್ಕಾರ.

ಬಂಟ್ವಾಳ :ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ ಬಂಟ್ವಾಳ ಸಂಸ್ಥೆಗೆ, ತನ್ನ ವ್ಯವಹಾರಿಕಾ ಸರ್ವತೋಮುಖ ಸಾಧನೆಗಾಗಿ, ವಿವಿಧೋದ್ದೇಶ ಸಹಕಾರಿ ಸಂಘಗಳ ವಿಭಾಗದಲ್ಲಿ ಸಾಧನಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಮಹಾಸಭೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ  ಸುಭಾಶ್ಚಂದ್ರ ಜೈನ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ  ಅಜಿತ್ ಕುಮಾರ್ ರವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ  ಗಜೇಂದ್ರ ಪ್ರಭು ಹಾಗೂ  ವಿಜಯ ಕುಮಾರಿ ಇಂದ್ರ

ಉಪಸ್ಥಿತರಿದ್ದರು.

ಸಂಘದ ಈ ಸಾಧನೆಗೆ ದೊರೆತ ಈ ಪುರಸ್ಕಾರವು ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ಸದಸ್ಯರ ಸಹಕಾರ ಮತ್ತು ಪರಿಶ್ರಮಕ್ಕೆ ಸಂದ ಗೌರವವಾಗಿರುತ್ತದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Leave a Comment