9/11 ಹಾಗೂ ಕಟ್ಟಡ ಪರವಾನಿಗೆ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ: ಬೇಬಿ ಕುಂದರ್

Coastal Bulletin
9/11 ಹಾಗೂ ಕಟ್ಟಡ ಪರವಾನಿಗೆ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ: ಬೇಬಿ ಕುಂದರ್

ಬಂಟ್ವಾಳ: 25 ಸೆಂಟ್ಸ್‌ವರೆಗಿನ (1,000 ಚದರ ಮೀಟರ್) ಜಮೀನಿನ ವಿನ್ಯಾಸ ಅನುಮೋದನೆ, 9/11 ಹಾಗೂ ಕಟ್ಟಡ ಲೈಸೆನ್ಸ್‌ ಅನುಮೋದನೆಗೆ ಗ್ರಾಮ ಪಂಚಾಯತ್‌ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷೆ ಬೇಬಿ ಕುಂದರ್ ಸ್ವಾಗತಿಸಿದ್ದಾರೆ.

ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.

ಖಾದರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಬೇಬಿ ಕುಂದರ್ ತಿಳಿಸಿದ್ದಾರೆ.

ಸ್ಥಳೀಯ ಮಟ್ಟದಲ್ಲೇ ಅಗತ್ಯ ಅನುಮೋದನೆಗಳನ್ನು ಪಡೆಯಲು ಅವಕಾಶ ಕಲ್ಪಿಸುವುದರಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

Leave a Comment