ಬಂಟ್ವಾಳ:ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ಮತ್ತು ಬಿಎಸ್ಸಿ ವಿದ್ಯಾರ್ಥಿಗಳಿಗೆ ಬುಧವಾರ ಉಚಿತ ಲ್ಯಾಪ್ ಟಾಪ್ ವಿತರಿಸಲಾಯಿತು.
ವಿದೇಶಿ ವಿಶ್ವವಿದ್ಯಾನಿಲಯದಲ್ಲಿ ವಿಜ್ಞಾನಿ ವಿದ್ಯಾರ್ಥಿ ಗಳಿಗೆ ನೀಡುವ ಗುಣಮಟ್ಟದ ತಂತ್ರಜ್ಞಾನ ಸೌಲಭ್ಯ ನಮ್ಮ ದೇಶದಲ್ಲೇ ಸಿಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಹೇಳಿದ್ದಾರೆ.
ಇಲ್ಲಿನ ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ಮತ್ತು ಬಿಎಸ್ಸಿ ವಿದ್ಯಾರ್ಥಿಗಳಿಗೆ ಬುಧವಾರ ಉಚಿತ ಲ್ಯಾಪ್ ಟಾಪ್ ವಿತರಿಸಿ ಅವರು ಮಾತನಾಡಿದರು.
ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ಪ್ರೊ.ಕರುಣಾಕರ ಎ. ಕೋಟೆಕಾರ್,
ಬೆಂಗಳೂರಿನ ಆಕಾಶ್ ಹಾಸ್ಪಿಟಲ್ನ ಆರ್ಎಂಒ. ಡಾ. ಸುನಿಲ್ ಹೆಗಡೆ, ಮುಖ್ಯ ಲೆಕ್ಕಾಧಿಕಾರಿ ವಿನಾಯಕ ರಾವ್ ಬಿ.ಎಸ್, ಉಡುಪಿ ಜಿಲ್ಲಾ ಭಾಜಪ ಮಾಜಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗಡೆ, ಶಾಲಾ ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಎನ್., ಡಾ. ಕಮಲಾ ಪ್ರಭಾಕರ ಭಟ್, ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ಕಟ್ಟೆ ಇದ್ದರು. ವಿದ್ಯಾರ್ಥಿನಿ ಹರ್ಷಿತಾ ಎಸ್. ಸ್ವಾಗತಿಸಿ, ಹರ್ಷಿತಾ ವಂದಿಸಿದರು. ಹಿತೇಶ್ ನಿರೂಪಿಸಿದರು.















