ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 78ನೇ ಜನ್ಮದಿನದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನಾ ಕಚೇರಿ ವ್ಯಾಪ್ತಿಯ ತುಂಬೆ ವಲಯದ ವತಿಯಿಂದ ನೆತ್ತರಕೆರೆ ಹೊಳ್ಳರಬೈಲು ಶ್ರಾವ್ಯ ಗೋಕುಲ ಗೋಮಂದಿರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಯಿತು.
ತುಂಬೆ ವಲಯದ ಜನಜಾಗೃತಿ ವೇದಿಕೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರು, ನವಜೀವನ ಸಮಿತಿ ಸದಸ್ಯರು ಹಾಗೂ ವೀರೇಂದ್ರ ಹೆಗ್ಗಡೆಯವರ ಅಭಿಮಾನಿಗಳ ಬಳಗದ ಸಹಯೋಗದಲ್ಲಿ ಶ್ರಾವ್ಯ ಗೋಕುಲ ಗೋಮಂದಿರದಲ್ಲಿ ಗೋಪೂಜೆ ನೆರವೇರಿಸಲಾಯಿತು. ಬಳಿಕ ಗೋವುಗಳಿಗೆ ಮೇವು ಹಾಗೂ ಹಸಿರು ಹುಲ್ಲು ವಿತರಿಸುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
style="width: 268px;">
ಕಾರ್ಯಕ್ರಮದಲ್ಲಿ ಗೋಶಾಲೆಯ ಪ್ರಮುಖರಾದ ನಾರಾಯಣ ಹೊಳ್ಳ ನೆತ್ತರಕೆರೆಗುತ್ತು, ಜನಜಾಗೃತಿ ವೇದಿಕೆ ಸದಸ್ಯ ಭಾಸ್ಕರ್ ಚೌಟ ಕುಮ್ಡೇಲ್, ಐತಪ್ಪ ಅಳ್ವ ಸುಜೀರ್ ಗುತ್ತು, ಪದ್ಮನಾಭ ಗೋವಿನ ತೋಟ, ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ. ತುಂಬೆ ವಲಯ ಮೇಲ್ವಿಚಾರಕಿ ಮಮತಾ, ವಿವಿಧ ಒಕ್ಕೂಟಗಳ ಅಧ್ಯಕ್ಷರು, ಸೇವಾ ಪ್ರತಿನಿಧಿಗಳು ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.










