ಬಂಟ್ವಾಳ: ರಾರಾಸಂ ಫೌಂಡೇಶನ್ ಬಂಟ್ವಾಳ ಇದರ 12 ನೇ ವರ್ಷದ ಸಾಂಸ್ಕೃತಿಕ ಕಲರವ ಬಿ.ಸಿ. ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಭಾನುವಾರ ನಡೆಯಿತು.
ಏರ್ಯಬೀಡು ಬಾಲಕೃಷ್ಣ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ನಾವು ಏಕಾಗ್ರತೆಯಿಂದ ಕೆಲಸ ಮಾಡಿದಾಗ ಯಶಸ್ಸು ಗಳಿಸಲು ಸಾಧ್ಯವಿದೆ. ಮಾಡುವ ಕೆಲಸವನ್ನು ಶ್ರದ್ಧೆಯಿಂದ ಮಾಡಿದಾಗ ಫಲ ಸಿಗುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಬಂಟ್ವಾಳ ತಾಲೂಕು
ಕುಲಾಲ ಸುಧಾರಕ ಸಂಘದ ಅಧ್ಯಕ್ಷ ನಾರಾಯಣ ಸಿ. ಪೆರ್ನೆ, ನಿವೃತ್ತ ಮುಖ್ಯ ಶಿಕ್ಷಕ ಬಿ. ರಾಮಚಂದ್ರ ರಾವ್, ವಕೀಲ ಸುರೇಶ್ ಕುಮಾರ್ ನಾವೂರು, ರಾರಾಸಂ ಫೌಂಡೇಶನ್ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಉಪಸ್ಥಿತರಿದ್ದರು.
ನಿರ್ದೇಶಕರಾದ ಕೇಶವ ಮಾಸ್ತರ್ ಸ್ವಾಗತಿಸಿದರು, ದಾಮೋದರ್ ಏರ್ಯ ಕಾರ್ಯಕ್ರಮ ನಿರೂಪಿಸಿದರು. ವಂದಿಸಿದರು. ಬಳಿಕ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆಯಿತು.














