Coastal Bulletin

ಮಂಗಳೂರು: ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಅವರು ಇಂದು ಸಾವನ್ನಪ್ಪಿದ್ದಾರೆ.

ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಶೀಲಾ ದಿವಾಕರ್ 3000ಕ್ಕೂ ಅಧಿಕ ಪ್ರತಿಷ್ಠಿತ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿದ್ದರು. ಸಂಗೀತ ಕ್ಷೇತ್ರದಲ್ಲಿ ಅವಳಿ ಸಹೋದರಿಯರಾಗಿ ಶೀಲ ಮತ್ತು ಶೈಲ ಅವರು ಪ್ರಸಿದ್ಧಿ ಪಡೆದುಕೊಂಡಿದ್ದರು.

align="left">

ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು  ಪ್ರತಿಭೆಗಳಿಗೆ ಗುರುವಾಗಿರುವ ಇವರು ಅನಾರೋಗ್ಯದ ಕಾರಣದಿಂದ ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಚಿಕಿತ್ಸೆ ಫಲಿಸದೆ ಇಂದು  ಕೊನೆಯುಸಿರೆಳೆದಿದ್ದಾರೆ.

Leave a Comment