ಮಂಗಳೂರು :ಪೆರ್ಮಂಕಿ ಪ್ರೀತಿ ಗೇಮ್ಸ್ ಕ್ಲಬ್ ಇದರ ವತಿಯಿಂದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ 40ನೇ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿ ವೇತನ ವಿತರಣೆ , ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಫೆ.4 ರಂದು ನಡೆಯಲಿದೆ.
ಫೆ.4 ರಂದು ಬೆಳಗ್ಗೆ 8 ಗಂಟೆಗೆ ಸಂಘದಲ್ಲಿ ಗಣಹೋಮ . ನಂತರ ಪೆರ್ಮಂಕಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ, ಹೂವಿನ ಪೂಜೆ, ಮಹಾಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ಅನ್ನಸಂತರ್ಪಣೆ ಇರಲಿದೆ. ಸಂಜೆ 6 ಗಂಟೆಯಿಂದ ಪೆರ್ಮಂಕಿಯ ಸ್ಥಳೀಯ
ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಭಾ ಕಾರ್ಯಕ್ರಮ ಜರಗಲಿದೆ. ನಂತರ ಅನ್ನಸಂತರ್ಪಣೆ ಕೂಡ ಇರಲಿದೆ.
ರಾತ್ರಿ 9 ಗಂಟೆಯ ಹೊತ್ತಿಗೆ ಸಂಘದ ಸದಸ್ಯರು ಹಾಗೂ ಅತಿಥಿ ಕಲಾವಿದರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಿನಕರ ಭಂಡಾರಿ ಕಣಂಜಾರು ವಿರಚಿತರಿಂದ ದಾಲ ಉಂಡ? ಎಂಬ ಸಾಮಾಜಿಕ ಹಾಸ್ಯಮಯ ನಾಟಕ ಇರಲಿದೆ.














