ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪುರಸ್ಕಾರಗಳನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಒಟ್ಟು 106 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಇದರಲ್ಲಿ ಆರು ಪದ್ಮವಿಭೂಷಣ, ಒಂಭತ್ತು ಪದ್ಮಭೂಷಣ ಮತ್ತು 91 ಪದ್ಮಶ್ರೀಗಳನ್ನು ಪ್ರಕಟಿಸಲಾಗಿದೆ.
ಎಂಟು ಕನ್ನಡಿಗರಿಗೆ ಪದ್ಮ ಪುರಸ್ಕಾರ 2023ನೇ ಸಾಲಿನ ಪದ್ಮ ಪ್ರಶಸ್ತಿಯಲ್ಲಿ ರಾಜ್ಯದ ಎಂಟು ಜನರಿಗೆ ಗೌರವ ಸಿಕ್ಕಿದೆ. ವಿಜ್ಞಾನ ಎಂಜಿನಿಯರಿಂಗ್ ವಿಭಾಗದಲ್ಲಿ ಖಾದರ್ ವಲ್ಲಿ ದುಡೇಕುಲಾ ಹಾಗೂ ಕಲಾ ವಿಭಾಗದಲ್ಲಿ ರಾಣಿ ಮಾಚಯ್ಯ, ನಾಡೋಜ ಪಿಂಡಿಪನಹಳ್ಳಿ ಮುನಿವೆಂಕಟಪ್ಪ, ಶಾ ರಶೀದ್ ಅಹ್ಮದ್ ಖಾದ್ರಿ ಮತ್ತು ಪುರಾತತ್ವ ಕ್ಷೇತ್ರದಲ್ಲಿ
ಎಸ್.ಸುಬ್ಬರಾಮನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.
ಇದಲ್ಲದೆ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಪದ್ಮವಿಭೂಷಣ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಈ ಮೂಲಕ ಕರ್ನಾಟಕದ ಒಟ್ಟು 8 ಸಾಧಕರು ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.














