ಬಂಟ್ವಾಳ: ಕರ್ನಾಟಕ ಜೂಡೋ ಸಂಸ್ಥೆ ಬೆಂಗಳೂರು ಇದರ ಆಶ್ರಯದಲ್ಲಿ ಬೆಂಗಳೂರ್ ನಲ್ಲಿ ನಡೆದ 40 ನೇ ಕರ್ನಾಟಕ ರಾಜ್ಯ ಸಬ್ ಜೂನಿಯರ್, ಕ್ಯಾಡೆಟ್ ಜೂಡೋ ಚಾಂಪಿನ್ ಶಿಪ್ ನ ಬಾಲಕ ಬಾಲಕಿಯ 35 ಕೆ.ಜಿ. ಸಬ್ ಜೂನಿಯರ್ ವಿಭಾಗದಲ್ಲಿ ಗೀತೇಶ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾನೆ.
ಇವರು ಪೊಳಲಿ ರಾಮಕೃಷ್ಣ ತಪೋವನದಲ್ಲಿ ಮಾರ್ಷಲ್ ಆರ್ಟ್ ತರಬೇತುದಾರ ರಾಕೇಶ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಪೊಳಲಿ
ರಾಮಕೃಷ್ಣ ತಪೋವನದ ವಿವೇಕಾ ಚೈತನ್ಯಾನಂದ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ. ಈತ ಕಳ್ಳಿಗೆ ಗ್ರಾ.ಪಂ. ಉಪಾಧ್ಯಕ್ಷ ದಾಮೋದರ ನೆತ್ತರಕೆರೆ ಅವರ ಪುತ್ರ.














