ಮಂಗಳೂರು: ಬಿಜೆಪಿ ಯುವಮೋರ್ಚಾ ಮುಖಂಡ ಮತ್ತು ಸಾಮಾಜಿಕ ಕಾರ್ಯಕರ್ತನಾಗಿದ್ದ ಯುವಕನನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಕೊಚ್ಚಿ ಕೊಲೆ ಗೈದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆಯಾದ ಯುವಕ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ಅಂಗಡಿ ಬಳಿ ಇದ್ದ ವೇಳೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ್‌ನನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸುವ ದಾರಿಯ ಮಧ್ಯೆಯೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಬೆಳ್ಳಾರೆಯಲ್ಲಿ ಮಸೂದ್ ಎಂಬ ಯುವಕನ ಕೊಲೆಯಾಗಿತ್ತು ಕ್ಷುಲ್ಲಕ ಕಾರಣಕ್ಕೆ ಕಾಸರಗೋಡು ನಿವಾಸಿ ಮಸೂದ್(18) ಮೇಲೆ ಬಾಟಲಿಯಿಂದ ತಲೆಗೆ
ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಿಸದೇ ಮಸೂದ್ ಸಾವನ್ನಪ್ಪಿದ್ದ. ಹೀಗಾಗಿ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಬಿಜೆಪಿ ಮುಖಂಡನ ಕೊಲೆ ಶಂಕೆ ವ್ಯಕ್ತವಾಗಿದೆ.

















