ನೆತ್ತರಕೆರೆ :ಎಡುವೆಂಚರ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ. ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ನಿವೃತ್ತ ಪ್ರಾಚಾರ್ಯರಿಗೆ ಸನ್ಮಾನ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಅಗತ್ಯ:ಎಸ್.ಎಲ್  ಭೋಜೇಗೌಡ.

Coastal Bulletin
ನೆತ್ತರಕೆರೆ :ಎಡುವೆಂಚರ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ. ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ನಿವೃತ್ತ ಪ್ರಾಚಾರ್ಯರಿಗೆ ಸನ್ಮಾನ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಅಗತ್ಯ:ಎಸ್.ಎಲ್  ಭೋಜೇಗೌಡ.

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ (ರಿ.)ಮಂಗಳೂರು ಹಾಗೂ ಎಡುವೆಂಚರ್ ಪದವಿ ಪೂರ್ವ ಕಾಲೇಜು ನೆತ್ತರಕೆರೆ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ, ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಪ್ರಾಚಾರ್ಯರ ಸನ್ಮಾನ ಕಾರ್ಯಕ್ರಮ ಎಡುವೆಂಚರ್ ಪದವಿ ಪೂರ್ವ ಕಾಲೇಜಿನಲ್ಲಿ ಜು.25ರಂದು ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ  ಎಸ್.ಎಲ್  ಭೋಜೇಗೌಡ, ಶಾಸಕರು ಕರ್ನಾಟಕ ವಿಧಾನ ಪರಿಷತ್ತು ಆಗಮಿಸಿ ಮಾತನಾಡುತ್ತಾ, ಬದಲಾದ ಶಿಕ್ಷಣ ವ್ಯವಸ್ಥೆಯ ಬಗೆಗೆ ಬೆಳಕು ಹರಿಸಿದರು. ಇಂದಿನ ವಿದ್ಯಾಭ್ಯಾಸದಲ್ಲಿ  ಶಿಕ್ಷಣ ಕ್ರಾಂತಿ ಅಗತ್ಯವಾಗಿದೆ. ಆಡಳಿತಾತ್ಮಕ ವಲಯದಲ್ಲಿ ಅಮೂಲಾಗ್ರ ಬದಲಾವಣೆಯೊಂದೆ ಇದಕ್ಕೆ ದಾರಿ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಡಾ. ನವೀನ್ ಶೆಟ್ಟಿ ಕೆ.  ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು.

ಹರಿಪ್ರಕಾಶ್ ಬೈಲಾಡಿ,ಅಧ್ಯಕ್ಷರು, ದ.ಕ ಜಿಲ್ಲಾ ಘಟಕ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಬೆಂಗಳೂರು, ಇವರು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಶುಭಹಾರೈಸಿದರು.

ವಿಠಲ ಎ. ಜಂಟಿ ಕಾರ್ಯದರ್ಶಿ,ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಬೆಂಗಳೂರು,ಇವರು ಮಾತನಾಡುತ್ತಾ,ಕಾಲೇಜು ಉಪನ್ಯಾಸಕ

ವೃಂದದವರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳ ಬಗೆಗೆ ಬೆಳಕು ಹರಿಸಿದರು.

ಆ ಬಳಿಕ ನಿವೃತ್ತ ಪ್ರಾಚಾರ್ಯರಿಗೆ ಹಾಗೂ ಕಳೆದ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಗೆ ಗರಿಷ್ಠ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು.

ಎಡುವೆಂಚರ್ ಪದವಿ ಪೂರ್ವ ಕಾಲೇಜಿನ  ಇದರ ಅಧ್ಯಕ್ಷರಾದ ಅಮೃತ್ ರೈ ಯು. ಮಾತನಾಡುತ್ತಾ ಸಂಸ್ಥೆಯ ಉಗಮದ ಬಗೆಗೆ ವಿವರಿಸಿದರು.

ಎಡುವೆಂಚರ್ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿಗಳಾದ ರಕ್ಷಿತಾ ಅಮೃತ್ ರೈ, ಹಾಗೂ ಪ್ರಾಂಶುಪಾಲರಾದ ಮಹೇಶ್ ಕೆ ಎನ್,ಪ್ರಾಚಾರ್ಯರ ಸಂಘದ ಕಾರ್ಯದರ್ಶಿಗಳಾದ  ಮಮತಾ, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪಾಂಡ್ಯರಾಜ್ ಬಲ್ಲಾಳ್ ಕಾಲೇಜಿನ ಪ್ರಾಂಶುಪಾಲೆಯಾದ ಶರ್ಮಿಳಾ  ಹಾಗೂ ಎಡುವೆಂಚರ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಸತೀಶ್ ಆಚಾರ್ಯ ನಿರೂಪಿಸಿದರು. ಡೆಸ್ಮಾನ್ ಡೆಮೇಲ್ಲೋ ಅವರು ಧನ್ಯವಾದವಿತ್ತರು.

Leave a Comment