ವೀರಕಂಭ :ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ ಸಮಾರಂಭ.

Coastal Bulletin
ವೀರಕಂಭ :ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ ಸಮಾರಂಭ.

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಆಯ್ಕೆಯಾದ ಅಧ್ಯಕ್ಷ ಲಲಿತಾ ಹಾಗೂ ಉಪಾಧ್ಯಕ್ಷ ಜನಾರ್ಧನ ಪೂಜಾರಿ ಯವರ ಅಧಿಕಾರ ಪದಗ್ರಹಣ ಕಾರ್ಯಕ್ರಮ ವೀರಕಂಭ ಗ್ರಾಮ ಪಂಚಾಯಿತಿನಲ್ಲಿ ಜರಗಿತು.

ಮಾಜಿ ಸಚಿವರಾದ ರಮನಾಥ ರೈ ಪದಗ್ರಹಣ ನೆರವೇರಿಸಿ, ಮಾದರಿ ಗ್ರಾಮ ಪಂಚಾಯತ್ ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಶ್ರಮಿಸಿ ಎಂದು ಹೇಳಿ ಶುಭ ಹಾರೈಸಿದರು.

 ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಕಾರ್ಯದರ್ಶಿ ಎಂ ಎಸ್ ಮಹಮದ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂದೀಪ್ ಕುಮಾರ್ ಶೆಟ್ಟಿ, ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ

ನವಾಜ್, ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಸ್ ಆಲಿ,ಬೋಳಂತೂರು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ್ ರೈ, ರತ್ನಾಕರ ಭಂಡಾರಿ ಅರೆಬೆಟ್ಟು ಗುತ್ತು, ಕಾಂಗ್ರೆಸ್ ಜಿಲ್ಲಾ ಹಿಂದುಳಿದ ವಿಭಾಗದ ಮಾಜಿ ಕಾರ್ಯದರ್ಶಿ ಸತೀಶ್ ಪೂಜಾರಿ ಬಾಯಿಲ, ವೀರಕಂಭ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೆಪುಲಕೋಡಿ , ಪಂಚಾಯತ್ ಸದಸ್ಯರಾದ ನಿಶಾಂತ್ ರೈ, ಅಬ್ದುಲ್ ರೆಹಿಮಾನ್, ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಬ್ಬಾಸ್, ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment