Coastal Bulletin

ಬಂಟ್ವಾಳ :ಬ್ರಹ್ಮಕಲಶದಿಂದ ಸಮಾಜದ ನವನಿರ್ಮಾಣವಾಗುವುದು. ಸಾನಿಧ್ಯಾಭಿವೃದ್ಧಿಯಿಂದ ಸಮಾಜಕ್ಕೆ ಕ್ಷೇಮ. ದೇವಸ್ಥಾನ ಇಡೀ ಸಮಾಜಕ್ಕೆ ಸಂಸ್ಕಾರ ಕೊಡುವ ಕೇಂದ್ರ. ಇದರಿಂದ ಯಾವುದೇ ಜಾತಿ ಮತ ಬೇಧವಿಲ್ಲದೆ ಇಡೀ ಸಮಾಜವನ್ನು ಒಗ್ಗೂಡಿಸಲು ಸಾಧ್ಯವಾಗುವುದು ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ನುಡಿದರು.

ಅವರು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ

ಬ್ರಹ್ಮಕಲಶೋತ್ಸವ ಪ್ರಯುಕ್ತ ಭಾನುವಾರ ದೇವಳದ ರಾಜಾಂಗಣದಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

Leave a Comment