ಬಂಟ್ವಾಳ :ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭವು ಬಿ.ಸಿ.ರೋಡಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅ.28ರಂದು ಮಂಗಳವಾರ ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಅವರು ಅ. 25ರಂದು ಸಂಜೆ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ಸಂಜೀವಿನಿ ಗುಂಪಿನಿಂದ ಹೊರಗುಳಿದ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳು ಈ ಸ್ವಸಹಾಯ ಸಂಘದಲ್ಲಿ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ತಾಲೂಕಿನಲ್ಲಿ 39 ಗುಂಪುಗಳ ರಚನೆಯಾಗಿದೆ, ಗೃಹಲಕ್ಷ್ಮೀ ಯೋಜನೆಯಲ್ಲಿ 527 ಕೋಟಿ ರೂ ಗಳನ್ನು ಬಂಟ್ವಾಳ ತಾಲೂಕಿನಲ್ಲಿ ಫಲಾನುಭವಿಗಳು ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಸಮಾರಂಭದಲ್ಲಿ ರಾಜ್ಯದ
ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯತಕ್ಷರಾದ ಪುಷ್ಪಾ ಅಮರನಾಥ್, ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಚಂದ್ರಶೇಖರ ಆಚಾರ್ಯ, ಕೃಷ್ಣಪ್ಪ ಪೂಜಾರಿ ಉಪಸ್ಥಿತರಿದ್ದರು.
















