ಬಂಟ್ವಾಳ:ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ನವೋದಯ ಆಟೋರಿಕ್ಷಾ ಚಾಲಕರ ಮಾಲಕರ ಸಂಘ (ರಿ.) ವತಿಯಿಂದ ನೂತನ ಆಂಬುಲೆನ್ಸ್ ಸೇವೆಯ ಲೋಕಾರ್ಪಣೆ ಹಾಗೂ ಸನ್ಮಾನ ಕಾರ್ಯಕ್ರಮ ನ. 1ರಂದು ಸಂಜೆ 7 ಗಂಟೆಗೆ ಬಡಕಬೈಲು ಜಂಕ್ಷನ್‌ನಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ. ರಮಾನಾಥ ರೈ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿರಲಿದ್ದು, ಸಮಾಜಮುಖಿ
ಸೇವೆಯ ಅಂಗವಾಗಿ ಆಂಬುಲೆನ್ಸ್ ಸೇವೆಯನ್ನು ಸಾರ್ವಜನಿಕರಿಗೆ ಸಮರ್ಪಿಸಲಾಗುವುದು.
ಸಂಘದ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ನಡೆಯಲಿದೆ. ರಾತ್ರಿ 9 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.








