ಬಂಟ್ವಾಳ: ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ- ಲಕ್ಷ್ಮಣ ಜೋಡುಕರೆಯಲ್ಲಿ ಡಿ.27ರಂದು 9ನೇ ವರ್ಷದ 'ಮಂಗಳೂರು ಕಂಬಳ' ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಹಾಗೂ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಬೆಳಗ್ಗೆ 8.30ಕ್ಕೆ ಕಂಕನಾಡಿ ಗರಡಿ ಅಧ್ಯಕ್ಷ ಕೆ. ಚಿತ್ತರಂಜನ್ ಕಂಬಳ ಉದ್ಘಾಟಿಸಲಿದ್ದಾರೆ. 2 ಸಂಜೆ ಸಭಾ ಕಾರ್ಯಕ್ರಮ ನಡೆಯಲಿದ್ದು,
ಮಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಡಾ.ಕೆ. ಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.















