breaking news

ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಆಯ್ಕೆ.

Coastal Bulletin
ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಆಯ್ಕೆ.

ಮೂಡುಬಿದಿರೆ : ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಇದರ ಅಧಿಕೃತ ಸಂಯೋಜನೆಗೆ ಒಳಪಡುತ್ತಿರುವ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಬುಧವಾರ ಇಲ್ಲಿನ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.

ಜಿಲ್ಲಾ ಸಂಘದ ಪ್ರತಿನಿಧಿಗಳಾದ ರಾಜೇಶ್ ಶೆಟ್ಟಿ ಚುನಾವಣಾ ಅಧಿಕಾರಿಯಾಗಿ ಹಾಗೂ ಕಿರಣ್ ಸಿರ್ಸಿಕರ್ ಸಹಾಯಕ ಚುನಾವಣಾ ಅಧಿಕಾರಿಯಾಗಿ ಭಾಗವಹಿಸಿದರು. ಎಲ್ಲ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆಯಿತು.

ಪದಾಧಿಕಾರಿಗಳ ವಿವರ: ಗಣೇಶ್ ಕಾಮತ್ ಎಂ. ( ಉಪಾಧ್ಯಕ್ಷ) , ಜೈಸನ್ ತಾಕೋಡೆ ( ಪ್ರಧಾನ ಕಾರ್ಯದರ್ಶಿ), ಶರತ್ ದೇವಾಡಿಗ ( ಕಾರ್ಯದರ್ಶಿ) ರಾಘವೇಂದ್ರ ಶೆಟ್ಟಿ ( ಕೋಶಾಧಿಕಾರಿ) ಯಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಿ . ಸೀತಾರಾಮ ಆಚಾರ್ಯ, ಪ್ರಸನ್ನ ಹೆಗ್ಡೆ, ಅಶ್ರಫ್ ವಾಲ್ಪಾಡಿ, ಪ್ರೇಮಶ್ರೀ ಕಲ್ಲಬೆಟ್ಟು, ಪುನೀತ್ ಆಯ್ಕೆಗೊಂಡಿದ್ದಾರೆ. , ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಹರೀಶ್ ಕೆ. ಅದೂರು, ಧನಂಜಯ ಮೂಡುಬಿದಿರೆ, ಯಶೋಧರ ವಿ. ಬಂಗೇರ ಸದಸ್ಯರಾಗಿದ್ದಾರೆ.

ಈವರೆಗೆ ತಾಲೂಕು ಪತ್ರಕರ್ತರ ಸಂಘದ ಜತೆಗಿದ್ದ ಮೂಡುಬಿದಿರೆ ಪ್ರೆಸ್ ಕ್ಲಬ್ ಸಂಘಟನೆ ಪ್ರತ್ಯೇಕ ಪದಾಧಿಕಾರಿಗಳ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸಲಿದೆ.

Leave a Comment