Coastal Bulletin

ಬಂಟ್ವಾಳ :ಪ್ರಧಾನಿ ಮೋದಿಯವರ ಚಾರಿತ್ರ್ಯ ಹರಣ ಮಾಡಲು ಕಾಂಗ್ರೆಸ್ ನಿರಂತರವಾಗಿ ಷಡ್ಯಂತ್ರ ರೂಪಿಸುತ್ತಿದೆ. ಆದರೆ ಆ ಎಲ್ಲಾ ಪ್ರಯತ್ನದಲ್ಲಿ ಕಾಂಗ್ರೆಸ್ ವಿಫಲವಾಗುತ್ತಿದೆ. ದೇಶ,ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವ ಸಂದರ್ಭದಲ್ಲಿ ನಿರಂತರವಾಗಿ ಹತ್ಯೆಗಳು ನಡೆದಿದ್ದು, ಇದರ ಕುರಿತು ಯಾರೂ ಮಾತನಾಡುತ್ತಿಲ್ಲ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹೇಳಿದರು.

ಅವರು ಬುಧವಾರ ಸಂಜೆ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆದ ಗ್ರಾಮವಿಕಾಸ ಯಾತ್ರೆಯ 12ನೇ ದಿನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಈ ಬಾರಿ ಕಾಂಗ್ರೆಸ್ ಏನು ಮಾಡಿದರೂ ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳನ್ನು ಪಡೆದು ಆಡಳಿತದ ಚುಕ್ಕಾಣಿ ಹಿಡಿಯುವುದು ಶತ ಸಿದ್ಧವಾಗಿದ್ದು, ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಮಾತನಾಡಿ, ಶಾಸಕರಾಗಿ ಜವಾಬ್ದಾರಿಯನ್ನು ಹೊತ್ತು ಪಾದಯಾತ್ರೆ ನಡೆಸುವುದು ಸವಾಲಿನ ವಿಚಾರವಾಗಿದ್ದು, ಆದರೆ ಕ್ಷೇತ್ರದ ಜನತೆಯ ಪ್ರೀತಿ ವಿಶ್ವಾಸದಿಂದ ಅತ್ಯಂತ ಯಶಸ್ವಿ ಪಾದಯಾತ್ರೆಯಾಗಿ

ಮೂಡಿಬಂದಿದ್ದು ಎಲ್ಲರಿಗೂ ಕೃತಜ್ಞತೆ ಅರ್ಪಿಸುತ್ತೇನೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ.ಮಾತನಾಡಿದರು. ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ನಗರ ನೀರು ಸರಬರಾಜು- ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ. ಭಟ್, ಕ್ಷೇತ್ರಾ ಧ್ಯಕ್ಷ ದೇವಪ್ಪ ಪೂಜಾರಿ,ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಷನ್ ಡಿ'ಸೋಜಾ, ಅಮ್ಮುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ವಾಮನ ಆಚಾರ್ಯ, ಕಳ್ಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ ದಯಾನಂದ್ ಉಪಸ್ಥಿತರಿದ್ದರು.

ಯಾತ್ರೆಯ ಸಂಚಾಲಕ ಬಿ. ದೇವದಾಸ್ ಶೆಟ್ಟಿ ಅವರು ಕ್ಷೇತ್ರಕ್ಕೆ ಶಾಸಕರು ನೀಡಿದ ಅನುದಾನ, ಅಭಿವೃದ್ಧಿ ಕಾಮಗಾರಿಗಳ ವಿವರ ನೀಡಿದರು. ಕಳ್ಳಿಗೆ ಗ್ರಾ ಪಂ ಉಪಾಧ್ಯಕ್ಷ ದಾಮೋದರ್ ನೆತ್ತರಕೆರೆ ಸ್ವಾಗತಿಸಿ. ಯುವ ಮೋರ್ಚಾ ಉಪಾಧ್ಯಕ್ಷ ಸುರೇಶ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು

Leave a Comment