Coastal Bulletin

ಬಂಟ್ವಾಳ : ಇಲ್ಲಿನ ಕೆನರಾ ಇಂಜಿನೀಯರಿಂಗ್ ಕಾಲೇಜಿನ ಉನ್ನತ ಭಾರತ್ ಅಭಿಯಾನ ಹಾಗೂ ರಾಷ್ಟ್ರೀಯ ಸೇವಾ ಯೋಜನೆಗಳ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಹಿರಿಯ ಪ್ರಾಥಮಿಕ ಶಾಲೆ ಮತ್ತು ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಹಾಗೂ ಇಂಜಿನೀಯರಿಂಗ್ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ತಂತ್ರಜ್ಞಾನದ ಮಾಹಿತಿ ಕಾರ್ಯಾಗಾರವನ್ನು ಇತ್ತೀಚಿಗೆ ನಡೆಯಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 190 ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಂಡರು.

ಕೆನರಾ ಇಂಜಿನೀಯರಿಂಗ್ ಕಾಲೇಜಿನ ಮೆಕಾನಿಕಲ್ ವಿಭಾಗದ ಉಪನ್ಯಾಸಕರಾದ ಡಾ. ನಿರಂಜನ ರೈ ಮತ್ತು ಎನ್ನೆಸ್ಸೆಸ್ ಸಂಯೋಜಕ ನಾರಾಯಣ ಸ್ವಾಮಿ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ನೇರಳಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಗೀತಾ ಕುಮಾರಿ,

ಶಿಕ್ಷಕರಾದ ಸುಧಾಕರ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಅಬೂಬಕ್ಕರ್, ಮತ್ತು ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ತ್ರಿವೇಣಿಯವರು ಉಪಸ್ಥಿತರಿದ್ದರು. ಏಮಾಜೆ ಶಾಲೆಯ ಗೌರವ ಶಿಕ್ಷಕಿ ಶ್ರೀಮತಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Leave a Comment