ಪುಂಜಾಲಕಟ್ಟೆ:ಮಾ.1ರಂದು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ ಆಶ್ರಯದಲ್ಲಿ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Coastal Bulletin
ಪುಂಜಾಲಕಟ್ಟೆ:ಮಾ.1ರಂದು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ ಆಶ್ರಯದಲ್ಲಿ ಸಾಮೂಹಿಕ ವಿವಾಹ ನಿಶ್ಚಿತಾರ್ಥ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 42ನೇ ವರ್ಷಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.8ರಂದು ನಡೆಯಲಿರುವ 18ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ ಮಾ.1ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಜರಗಲಿದೆ.

ಈ ಬಾರಿ ಒಟ್ಟು 7 ಜೋಡಿಗಳಿಗೆ ವಿವಾಹ ನಡೆಯಲಿದ್ದು, ತುಳುನಾಡಿನ ಸಂಪ್ರದಾಯ ಪ್ರಕಾರ ನಿಶ್ಚಿತಾರ್ಥ ನಡೆಯಲಿದೆ. ಈ ಸಂದರ್ಭದಲ್ಲಿ ಭಾವೀ ವಧು-ವರರಿಗೆ ಮಂಗಳವಸ್ತ್ರವನ್ನು ವಿತರಿಸಲಾಗುವುದು. ಪುಂಜಾಲಕಟ್ಟೆ ಉದ್ಯಮಿ ಗಣೇಶ್ ಮೂಲ್ಯ ಅನಿಲಡೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶ್ರೀ ಕ್ಷೇತ್ರ ಕಾರಿಂಜದ

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಬಿ.ಅಮೀನ್ ಅವರು ಅಧ್ಯಕ್ಷತೆ ವಹಿಸುವರು. ಉದ್ಯಮಿ ಜಗನ್ನಾಥ ಶೆಟ್ಟಿ ಕೆದ್ದಳಿಕೆ ಅವರು ಮಂಗಳ ವಸ್ತ್ರ ವಿತರಿಸುವರು. ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Comment