ಬಂಟ್ವಾಳ :ದ.ಕ.ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ.

Coastal Bulletin
ಬಂಟ್ವಾಳ :ದ.ಕ.ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ.

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಚಿದಂಬರ ಬೈಕಂಪಾಡಿಯವರ ಸರ್ವಾದ್ಯಕ್ಷತೆಯಲ್ಲಿ  ನಡೆಯುವ ದ.ಕ.ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಸಮ್ಮೇಳನವನ್ನು ದೀಪಬೆಳಗಿಸಿ, ಹಿಂಗಾರ ಅರಳಿಸಿ ಸಮ್ಮೇಳನ ಉದ್ಘಾಟಿಸುವ ಮೂಲಕ ಶುಕ್ರವಾರ ಬೆಳಿಗ್ಗೆ ವಿದ್ಯುಕ್ತ ಚಾಲನೆ ನೀಡಿದರು.

ಸಮ್ಮೇಳನಾಧ್ಯಕ್ಷ, ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ, ಕಾರ್ಯಾಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಭುವನಾಭಿರಾಮ ಉಡುಪ, ಅನಿಲ್ ಪಂಡಿತ್ ಬ್ರಹ್ಮರ ಕೂಟ್ಟು, ಜ್ಯೋತಿಷಿ ಚೈತನ್ಯ ಕಲ್ಯಾಣತ್ತಾಯ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಸುಭಾಶ್ಚಂದ್ರ ಜೈನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಯಾನಂದ, ದಿನೇಶ್, ಪ್ರಮುಖರಾದ ಉಮೇಶ್ ಕುಮಾ‌ರ್ ವೈ, ವಿವಿಧ ತಾಲೂಕಿನ ಕಸಾಪ

ಘಟಕಗಳ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು, ಡಿ.ಯದುಪತಿ ಗೌಡ, ಕೆ.ಸೇಸಪ್ಪ ರೈ, ಪುತ್ತೂರು ಉಮೇಶ್ ನಾಯಕ್, ಮಿಥುನ್ ಉಡುಪ, ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ರಾಜೇಶ್ವರಿ ಎಂ., ಎಚ್.ವಿನಯ ಆಚಾರ್ಯ, ಗೌರವ ಕೋಶಾಧ್ಯಕ್ಷ ಬಿ.ಐತಪ್ಪ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಿನೇಶ್ ರವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸಂದೇಶ ವಾಚಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ ಸ್ವಾಗತಿಸಿದರು. ಆಳ್ವಾಸ್ ಕಾಲೇಜು ಉಪನ್ಯಾಸಕ ಡಾ.ಯೋಗಿಶ್ ಕೈರೋಡಿ ಕಾರ್ಯಕ್ರಮ ನಿರ್ವಹಿಸಿದರು.

Leave a Comment