ಬಂಟ್ವಾಳ :ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಪುದು ಇದರ ವತಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಸಂಸ್ಮರಣೆ ಕಾರ್ಯಕ್ರಮ ಹಾಗೂ ಪಕ್ಷದ ವಿವಿಧ ಯೋಜನೆ ಮತ್ತು ನೂತನ ಸಂಸದರ ಅಭಿನಂದನಾ ಕಾರ್ಯಕ್ರಮದ ಬಗ್ಗೆ ಕಾರ್ಯಕರ್ತರ ಸಭೆಯು ಜೂ 26ರಂದು ಕುಲಾಲ ಸಮುದಾಯ ಭವನ ಮಾರಿಪಲ್ಲದಲ್ಲಿ ನಡೆಯಿತು.
ಪುದು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಜಗನ್ನಾಥ್ ಸಾಲಿಯಾನ್ ತುಂಬೆ ಇವರ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಈ ಸಭೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು, ಉಪಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ , ಮಂಡಲದ ಒಬಿಸಿ ಮೋರ್ಚಾದ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಜಿಲ್ಲಾ ಎಸ್ ಸಿ ಮೋರ್ಚಾದ ಉಪಾಧ್ಯಕ್ಷ ವಿಠ್ಠಲ್ ಸಾಲಿಯಾನ್
ಕುಮ್ದೇಲ್, ಪಲಾನುಭವಿ ಸಂಪರ್ಕ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಜಯಶ್ರೀ ಕರ್ಕೇರ ಅಬ್ಬೆಟ್ಟು, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸುಕೇಶ್ ಶೆಟ್ಟಿ ತೇವು, ಮೇರಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ನಾಯ್ಗ ಕೊಡಮಣ್ಣು, ಉಪಸ್ಥಿತರಿದ್ದರು,ವಿವಿಧ ಮೋರ್ಚಾಗಳ ಪ್ರಮುಖರು, ಗ್ರಾಮ ಪಂಚಾಯತ್ ಸದಸ್ಯರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತಿತರರು ಇದ್ದರು.









