ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ಪ್ರೆಸ್ ಕ್ಲಬ್ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ವಿತರಕರಿಗೆ ಸನ್ಮಾನ ಕಾರ್ಯಕ್ರಮ ಬಿ.ಸಿ.ರೋಡು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಡಿವೈಎಸ್ಪಿ ವೆಲಂಟೈನ್ ಡಿಸೋಜ ಮಾತನಾಡಿ ಪತ್ರಕರ್ತರು ಮತ್ತು ಇಲಾಖೆಯೊಂದಿಗಿನ ನಿಕಟ ಬಾಂಧವ್ಯವನ್ನು ಸ್ಮರಿಸಿದರು.ಬಂಟ್ವಾಳ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಪುಷ್ಪಲತಾ ವಿತರಕರಿಗೆ ಸನ್ಮಾನ ಕಾರ್ಯಕ್ರಮ ಶ್ಲಾಘನಾರ್ಹ ಎಂದರು.ಹಿರಿಯ ಪತ್ರಿಕಾ ವಿತರಕರಾದ ನರಸಿಂಹ ಪೈ,ಕೆ.ವಿ.ರಾಜಮ್ಮ ಮತ್ತು ಲೋಕಯ್ಯ ಗೌಡ ಅವರನ್ನು ಸನ್ಮಾನಿಸಲಾಯಿತು.
ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಅಧ್ಯಕ್ಷ ಹರೀಶ ಮಾಂಬಾಡಿ ಅಧ್ಯಕ್ಷತೆ ವಹಿಸಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ
ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಶುಭ ಹಾರೈಸಿದರು.ವೇದಿಕೆಯಲ್ಲಿ ಪ್ರೆಸ್ ಕ್ಲಬ್ ಬಂಟ್ವಾಳ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಉಪಸ್ಥಿತರಿದ್ದರು.ಪೂರ್ವಾಧ್ಯಕ್ಷ ಸಂದೀಪ್ ಸಾಲ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಘದ ಸದಸ್ಯರಾದ ರತ್ಮದೇವ್ ಪುಂಜಾಲಕಟ್ಟೆ,ಕಿರಣ್ ಸರಪಾಡಿ,ರಮೇಶ್ ಕೆ.ಪುಣಚ ಸನ್ಮಾನಿತರನ್ನು ಪರಿಚಯಿಸಿದರು.ಸದಸ್ಯರಾದ ವಾಮನ ಪೂಜಾರಿ,ಇಮ್ತಿಯಾಜ್ ಶಾ ತುಂಬೆ,ಅಬ್ದುಲ್ ರಹಿಮಾನ್ ತಲಪಾಡಿ,ಯಾದವ್ ಅಗ್ರಬೈಲ್,ಚಂದ್ರಶೇಖರ ಕಲ್ಮಲೆ ಅತಿಥಿಗಳನ್ನು ಗೌರವಿಸಿದರು. ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಲಿ ವಿಟ್ಲ ವಂದಿಸಿದರು,ನಿಕಟಪೂರ್ವಾಧ್ಯಕ್ಷ ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರೂಪಿಸಿದರು.















