Coastal Bulletin

ಬಂಟ್ವಾಳ: ರಾಜ್ಯ ಮತ್ತು ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳ ಬೆಲೆಯನ್ನು ಪದೇ ಪದೇ ಏರಿಕೆ ಮಾಡುವ ಮೂಲಕ ಜನಸಾಮಾನ್ಯರಿಗೆ ನೆಮ್ಮದಿಯಿಂದ ಜೀವಿಸಲು ಬಿಡುತ್ತಿಲ್ಲ. ಕೇವಲ ಉದ್ರೇಕಕಾರಿ ಮತ್ತು ಜನರ ಭಾವನೆಗಳನ್ನು ಕೆರಳಿಸುವ ಭಾಷಣ ಮಾಡುತ್ತಲೇ ಕಾಲಹರಣ ಮಾಡುತ್ತಿರುವ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಇಲ್ಲಿನ ಬಿ.ಸಿ.ರೋಡು ಮಿನಿ ವಿಧಾನಸೌಧ ಎದುರು ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಬೆಲೆ ಏರಿಕೆ ವಿರುದ್ಧ ಮಂಗಳವಾರ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

 ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಮತ್ತಿತರರು ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು. 

ಇದೇ ವೇಳೆ ಅಡುಗೆ ಅನಿಲ ಮತ್ತು ಮೊಸರಿನ ಪ್ಯಾಕೆಟ್ ಪ್ರದರ್ಶಿಸಿದ ಪ್ರತಿಭಟನಾಕಾರರು, ಇಂಧನ

ಬೆಲೆ ಏರಿಕೆ, ಜಿಎಸ್ಟಿ ಹೇರಿಕೆ, ಅಗ್ನಿಪಥ್ ಯೋಜನೆ ವಿರುದ್ಧ ಘೋಷಣೆ ಕೂಗಿದರು.

ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಬಂಟ್ವಾಳ ಬ್ಲಾಕ್ ಮಹಿಳಾ ಘಟಕ ಅಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್, ಮಾಜಿ ಅಧ್ಯಕ್ಷೆ ಮಲ್ಲಿಕಾ ವಿ. ಶೆಟ್ಟಿ, ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ್ ಜೈನ್, ಅಬ್ಬಾಸ್ ಆಲಿ, ಕೆ.ಪದ್ಮನಾಭ ರೈ ಮತ್ತಿತರರು ಇದ್ದರು.

Leave a Comment