Coastal Bulletin

ಬೆಂಗಳೂರು : ನಟ ಕಿಚ್ಚ ಸುದೀಪ್‌ ನಟನೆಯ, ಅನೂಪ್‌ ಭಂಡಾರಿ ನಿರ್ದೇಶನದ ಪ್ಯಾನ್ ಇಂಡಿಯಾ ಬಿಗ್‌ ಬಜೆಟ್‌ ಸಿನಿಮಾ 'ವಿಕ್ರಾಂತ್‌ ರೋಣ' ಸಿನಿಮಾ ಇವತ್ತು ಬಿಡುಗಡೆಗೊಳ್ಳಲಿದೆ.

ಈ ಚಿತ್ರದಲ್ಲಿ ಸುದೀಪ್ ತನಿಖಾ ಪೊಲೀಸ್ ಆಗಿ ಕಾಣಿಸಿಕೊಂಡಿದ್ದು ಅವರ ಪಾತ್ರ ಎಲ್ಲರನ್ನೂ ಸೆಳೆಯುತ್ತಿದೆ. ಸುದೀಪ್‌ಗೆ ಅನೇಕ ನಟ-ನಟಿಯರು, ತಂತ್ರಜ್ಞರು, ನಿರ್ಮಾಪಕರು ಶುಭ ಕೋರಿದ್ದಾರೆ.

ಈ ಚಿತ್ರ ಟೀಸರ್, ಪೋಸ್ಟರ್‌ಗಳ ಮೂಲಕ ಈಗಾಗಲೇ ಸದ್ದು ಮಾಡಿತ್ತು. ಫೆ.24ರಂದು ತೆರೆ ಕಾಣಬೇಕಿದ್ದ ಚಿತ್ರದ ಬಿಡುಗಡೆ ಕೋವಿಡ್‌ ಸೃಷ್ಟಿಸಿದ ಪ್ರತಿಕೂಲ ಪರಿಸ್ಥಿತಿ, ನಿಯಮಾವಳಿಗಳ ಇತಿಮಿತಿಗಳಿಂದಾಗಿ ಜುಲೈ 28 ಕ್ಕೆ 3ಡಿಯಲ್ಲಿ ಬರುತ್ತಿದೆ.

ಸುದೀಪ್‌ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನಲ್ಲಿ ಡಬ್ಬಿಂಗ್‌ ಮಾಡಿದ್ದಾರೆ. ನಿರೂಪ್‌ ಭಂಡಾರಿ ಹಾಗೂ ನೀತಾ ಅಶೋಕ್‌

ಸಹ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈ ಚಿತ್ರದ ಮುಖಾಂತರ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದು, ರಕೇಲ್‌ ಡಿಕೋಸ್ಟ ಉರ್ಫ್‌ 'ಗಡಂಗ್‌ ರಕ್ಕಮ್ಮ'ನಾಗಿ ವಿಶೇಷ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಹಿಂದಿ ಹಾಗೂ ಇತರ ಭಾಷೆಗಳಲ್ಲಿ ಪ್ರಮೋಷನ್ಸ್‌ ಸೇರಿ ಚಿತ್ರದ ಬಜೆಟ್‌ ₹100 ಕೋಟಿ ದಾಟಿದೆ ಎಂದು ಇತ್ತೀಚೆಗೆ ಚಿತ್ರದ ನಿರ್ಮಾಪಕ ಜಾಕ್‌ ಮಂಜು ತಿಳಿಸಿದ್ದರು. ಜೀ ಸ್ಟುಡಿಯೊಸ್‌ ಹಾಗೂ ಕಿಚ್ಚ ಕ್ರಿಯೇಷನ್ಸ್‌ನಡಿ ಜಾಕ್‌ ಮಂಜು ಅವರ ಶಾಲಿನಿ ಆರ್ಟ್ಸ್‌ ಈ ಚಿತ್ರವನ್ನು ವಿತರಣೆ ಮಾಡಲಿದೆ. ಚಿತ್ರಕ್ಕೆ ಬಿ.ಅಜನೀಶ್‌ ಲೋಕನಾಥ್‌ ಸಂಗೀತವಿದೆ.

Leave a Comment