ಬಂಟ್ವಾಳ:ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆ ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಪೂರಕವಾಗಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ ಹೇಳಿದ್ದಾರೆ.
ಇಲ್ಲಿನ ವೀರಕಂಭ ಮಜಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶುಕ್ರವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸಹಿತ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮೂಹ ಸಂಪನ್ಮೂಲ ಕೇಂದ್ರ, ಸರ್ಕಾರಿ ಪ್ರಾಥಮಿಕ ಶಾಲೆ, ಸಿಟಿ ರೋಟರಿ ಕ್ಲಬ್ ಬಿ.ಸಿ.ರೋಡ್ ಇದರ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.
ರೊಟರಿ ಕ್ಲಬ್ ಅಧ್ಯಕ್ಷೆ ಪಲ್ಲವಿ ಕಾರಂತ್,
ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಶಿಕ್ಷಣ ಸಂಯೋಜಕಿ ಸುಧಾ, ಶುಭ ಹಾರೈಸಿದರು.
ಕ್ಲಬ್ಬಿನ ಮಾಜಿ ಅಧ್ಯಕ್ಷರಾದ ಕೆ.ಪದ್ಮನಾಭ ರೈ, ಸತೀಶ್ ಕುಮಾರ್ ಕೆ. ಪ್ರಮುಖರಾದ ಜಯಂತಿ, ಕೊರಗಪ್ಪ ನಾಯ್ಕ, ರಮೇಶ್ ಗೌಡ ಮೈರಾ, ಜಯಪ್ರಕಾಶ್ ತೆಕ್ಕಿಪಾಪು, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾಗರತ್ನ, ಸಮೂಹ ಸಂಪನ್ಮೂಲ ವ್ಯಕ್ತಿ ಮೆಡಿಲ್ಡಾ ಲೋಬೋ ಇದ್ದರು.
ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿ, ಶಿಕ್ಷಕಿ ಶಕುಂತಳಾ ಎಂ. ಬಿ. ವಂದಿಸಿದರು. ಶಿಕ್ಷಕಿ ಸಂಗೀತ ಶರ್ಮ ನಿರೂಪಿಸಿದರು.