ಫರಂಗಿಪೇಟೆ ಗಣೇಶೋತ್ಸವಕ್ಕೆ ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಚಾಲನೆ. ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿಯವರಿಂದ ಅಂಬ್ಯುಲೆನ್ಸ್ ಲೋಕಾರ್ಪಣೆ.

Coastal Bulletin
ಫರಂಗಿಪೇಟೆ ಗಣೇಶೋತ್ಸವಕ್ಕೆ ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಚಾಲನೆ. ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿಯವರಿಂದ ಅಂಬ್ಯುಲೆನ್ಸ್ ಲೋಕಾರ್ಪಣೆ.

ಬಂಟ್ವಾಳ :ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ 43ನೇ ವರ್ಷದ ಫರಂಗಿಪೇಟೆ ಗಣೇಶೋತ್ಸವಕ್ಕೆ ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು.

ಬಳಿಕ ಸಾರ್ವಜನಿಕ ಉಪಯೋಗಕ್ಕೆ ಅಂಬ್ಯುಲೆನ್ಸ್ ವಾಹನವನ್ನು ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಅವರು ಲೋಕಾರ್ಪಣೆ ಮಾಡಿದರು.ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.


ಈ ಸಂದರ್ಭದಲ್ಲಿ ಕುಂದಾಪುರದ ಸಹಾಯಕ ಕಮೀಷನರ್ ರಶ್ಮಿ ಎಸ್ ಆರ್. ಉದ್ಯಮಿ ಉಮೇಶ್

ಸಾಲ್ಯಾನ್, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ತೇವು ಚಂದ್ರಶೇಖರ ಆಳ್ವ, ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಭಕ್ತರಿಗೆ ಭತ್ತದ ತೆನೆಯನ್ನು ವಿತರಿಸಲಾಯಿತು.ಮೂರು ದಿನ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗಣೇಶೋತ್ಸವವು ಸಂಭ್ರಮದಿಂದ ನಡೆಯಲಿದೆ.

Leave a Comment