ಬಂಟ್ವಾಳ: ಪಕ್ಷ ನಿರಂತರವಾಗಿ ಅಧಿಕಾರಕ್ಕೆ ಬರುವಂತೆ ಮಾಡಲು , ಕಾರ್ಯಕರ್ತರ ನೇತೃತ್ವದಲ್ಲಿ ಪಕ್ಷ ಸಂಘಟನಾತ್ಮಕ ವಾಗಿ ಬೆಳೆಯಲು ಪೂರಕವಾಗಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಕಾರ್ಯಕರ್ತರಿಗೆ ಗೌರವ ನೀಡುವ, ಚಿಂತನೆಗೆ ಶಕ್ತಿ ತುಂಬುವ ಸಲುವಾಗಿ ಬೂತ್ ಅಧ್ಯಕ್ಷ ರ ಮನೆಗೆ ಬೇಟಿ ನೀಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.















