ತುಂಬೆ: ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ತುಂಬೆ ವಿದ್ಯಾಸಂಸ್ಥೆ: ಮಮತಾ ಗಟ್ಟಿ

Coastal Bulletin
ತುಂಬೆ: ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ತುಂಬೆ ವಿದ್ಯಾಸಂಸ್ಥೆ: ಮಮತಾ ಗಟ್ಟಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17ರ ವಯೋಮಾನದ ಸಾಮಾನ್ಯ ಹಾಗೂ ವಿಶೇಷ ಚೇತನ ಬಾಲಕ–ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಅ. 27ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು ದೀಪ ಪ್ರಜ್ವಲಿಸುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ. ಕ್ರೀಡೆಯು ಶಿಸ್ತು, ಆತ್ಮವಿಶ್ವಾಸ ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸುವುದರ ಜತೆಗೆ ಜೀವನದ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ನೀಡುತ್ತದೆ ಎಂದರು. ತುಂಬೆ ವಿದ್ಯಾಸಂಸ್ಥೆಯ ಸಾಧನೆಗಳನ್ನು ಶ್ಲಾಘಿಸಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಮಿಂಚಿರುವ ಈ ಸಂಸ್ಥೆಯು ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತುಂಬೆ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಬಿ. ಅಬ್ದುಲ್ ಸಲಾಂ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಸಹಕಾರ, ನಾಯಕತ್ವ, ಪರಸ್ಪರ ಗೌರವ ಮತ್ತು ಶಿಸ್ತಿನ ಗುಣಗಳನ್ನು ಬೆಳೆಸುತ್ತದೆ. ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದರು.

ಮಂಗಳೂರು ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕ ಶಶಿಧರ ಜಿ.ಎಸ್. ಮಾತನಾಡಿ, ಶಾಲಾ ಹಂತದಲ್ಲಿಯೇ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡುವುದು ಅಗತ್ಯ ಎಂದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹಾಗೂ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ವೃದ್ಧಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲೆಯ ವಿವಿಧ ಶಾಲೆಗಳ ಕ್ರೀಡಾಪಟುಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕ್ರೀಡಾ ಕೌಶಲ ಮತ್ತು ಪ್ರತಿಭೆಯನ್ನು ಪ್ರದರ್ಶಿಸಿದರು. ವಿಶೇಷ ಚೇತನ ವಿದ್ಯಾರ್ಥಿಗಳ ಭಾಗವಹಿಸುವಿಕೆಯು ಕ್ರೀಡಾಕ್ಷೇತ್ರದಲ್ಲಿ ಸಮಾನ ಅವಕಾಶ, ಸಮಾನ ಗೌರವ ಮತ್ತು ಒಳಗೊಳ್ಳುವಿಕೆಯ ಮಹತ್ವವನ್ನು ಸಾರಿತು.

ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್

ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಸ್ವಾಗತಿಸಿದರು. ಬಂಟ್ವಾಳ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ ಕಾರ್ಯಕ್ರಮ ನಿರೂಪಿಸಿದರು. ಬಂಟ್ವಾಳ ದೈಹಿಕ ಶಿಕ್ಷಣ ಪರಿವೀಕ್ಷಕಿ ಆಶಾ ನಾಯಕ್ ವಂದಿಸಿದರು. ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವಿದ್ಯಾ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮರ್ ಫಾರೂಕ್, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ತುಂಬೆ ಪದವಿಪೂರ್ವ ಕಾಲೇಜಿನ ರಕ್ಷಕ–ಶಿಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪುದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್ ಚಂದ್ರ ರೈ ದೇವಸ್ಯ, ತುಂಬೆ ರಾಯಲ್ ಗ್ರೂಪ್‌ನ ಆದಂ ಸಲಾಂ ಉಚ್ಚಿಲ, ಮೊಡಂಕಾಪು ಇನ್ಫ್ಯಾಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾ. ವಿಕ್ಟರ್ ಡಿಸೋಜ, ತುಂಬೆ ಪದವಿಪೂರ್ವ ಕಾಲೇಜಿನ ಕಚೇರಿ ಅಧೀಕ್ಷಕ ಅಬ್ದುಲ್ ಕಬೀರ್, ಪ್ರಾಂಶುಪಾಲ ದಿನೇಶ್ ಶೆಟ್ಟಿ ಅಳಿಕೆ, ನಿವೃತ್ತ ಪ್ರಾಂಶುಪಾಲ ಗಂಗಾಧರ ಆಳ್ವ, ತುಂಬೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ ಸಾಲ್ಯಾನ್, ತುಂಬೆ ಪ್ರೌಢಶಾಲೆಯ ಕನ್ನಡ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯಿನಿ ವಿದ್ಯಾ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯಿನಿ ಸೌಮ್ಯ,ಅನಿಲ್ ಪಂಡಿತ್, ಸದಾಶಿವ ಡಿ. ತುಂಬೆ, ರಕ್ಷಕ–ಶಿಕ್ಷಕ ಸಂಘದ ಉಪಾಧ್ಯಕ್ಷೆ ಮೋಹಿನಿ ಸುವರ್ಣ, ಸದಸ್ಯ ಮ್ಯಾಕ್ಸಿಮ್ ಕುವೆಲ್ಲೊ, ಸದಸ್ಯೆ ಚಂಚಲಾಕ್ಷಿ, ಕಾಲೇಜಿನ ಹಿರಿಯ ವಿದ್ಯಾರ್ಥಿ ಇರ್ಫಾನ್ ತುಂಬೆ ಹಾಗೂ ಮಹಮ್ಮದ್ ಸಫ್ವೀರ್ ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ನಿರ್ದೇಶಕರು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಶಿಕ್ಷಕರು ಮತ್ತು ಉಪನ್ಯಾಸಕರು ಭಾಗವಹಿಸಿದ್ದರು.

Leave a Comment