Coastal Bulletin

ಮಂಗಳೂರು: ಉಜಿರೆಯಲ್ಲಿ ಫೆ.3ರಿಂದ 5ರವರೆಗೆ ನಡೆಯುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೇಮಾವತಿ ವಿ. ಹೆಗ್ಗಡೆ ಅವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ಡಾ| ಎಂ. ಪಿ. ಶ್ರೀನಾಥ ಅವರು ತಿಳಿಸಿದ್ದಾರೆ.

ಹೇಮಾವತಿ ವಿ.

ಹೆಗ್ಗಡೆ ಅವರು ರಾಜ್ಯದ ಲಕ್ಷಾಂತರ ಗ್ರಾಮೀಣ ಮಹಿಳೆಯರಿಗೆ ಸ್ಪೂರ್ತಿ. ಅವರ ದೂರದೃಷ್ಟಿ ಆಲೋಚನೆಗಳು ಮತ್ತು ಚಿಂತನೆಗಳು ರಾಜ್ಯಾದ್ಯಂತ ವಿವಿಧ ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಿ ರಾಜ್ಯದ ಗ್ರಾಮೀಣ ಮಹಿಳೆಯರ ಜೀವನದಲ್ಲಿ ಸಮಗ್ರವಾದ ಸಬಲೀಕರಣವನ್ನುಂಟು ಮಾಡಿದೆ ಎಂದು ತಿಳಿಸಿದರು.

Leave a Comment