Coastal Bulletin

ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿದ್ದ ಸೆಕ್ಷನ್ 144 ಡಿಸೆಂಬರ್ 29 ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಪ್ರಸ್ತುತ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಬರುವ ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್

27 ಬೆಳಗ್ಗೆ 6 ರಿಂದ ಡಿಸೆಂಬರ್ 29, ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಇನ್ನು ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

Leave a Comment