ಬಂಟ್ವಾಳ: ತಾಲೂಕು ಬಂಟರ ಸಂಘ (ರಿ) ಇದರ ಮಹಿಳಾ ವಿಭಾಗದ ಅಶ್ರಯದಲ್ಲಿ ಮಂಗಳೂರು ಎ ಜೆ ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಮತ್ತು ಪಂಪ್ ವೆಲ್ ಎಂ ಐ ಒ ಕ್ಯಾನ್ಸರ್ ಸ್ಪೆಷಾಲಿಟಿ ಆಸ್ಪತ್ರೆ ಇವರಿಂದ ಕ್ಯಾನ್ಸರ್ ಬಗ್ಗೆ ಜಾಗೃತಿ ಹಾಗೂ ಅರಿವು ಕಾರ್ಯಕ್ರಮ ಮಾ.1ರಂದು ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ವರೆಗೆ ತುಂಬೆ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕ್ಯಾನ್ಸರ್ ತಜ್ಞೆ ಡಾ ದಿವ್ಯ ಜ್ಯೋತಿ ಅವರು ಉದ್ಘಾಟಿಸಲಿದ್ದು, ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಅಧ್ಯಕ್ಷತೆ ವಹಿಸುವರು. ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಸುಜಾತಾ ಪಿ ರೈ, ಕ್ಯಾನ್ಸರ್ ಆಸ್ಪತ್ರೆಯ ನಿರ್ದೇಶಕ ಹಾಗೂ ಹಿರಿಯ ಕ್ಯಾನ್ಸರ್ ತಜ್ಞ ಡಾ ಸುರೇಶ್ ರಾವ್, ಎ ಜೆ ಆಸ್ಪತ್ರೆಯ ಅಸಿಸ್ಟೆಂಟ್ ಪ್ರೊಫೆಸರ್ ಡಾ
ವಾಮನ ನಾಯಕ್ ಅವರು ಭಾಗವಹಿಸುವರು.
ಶಿಬಿರದಲ್ಲಿ ಹೃದ್ರೋಗ ತಪಾಸಣೆ, ಎಲುಬು ಮತ್ತು ಕೀಲು ತಪಾಸಣೆ, ಸ್ತ್ರೀ ರೋಗ ತಪಾಸಣೆ, ಕ್ಯಾನ್ಸರ್ ತಪಾಸಣೆ, ದಂತ ತಪಾಸಣೆ, ಕಣ್ಣಿನ ಪರೀಕ್ಷೆ ಹಾಗೂ ಉಚಿತ ಕನ್ನಡಕ ವಿತರಣೆ, ಬಿಪಿ, ಶುಗರ್ ಹಾಗೂ ಸಾಮಾನ್ಯ ತಪಾಸಣೆಗಳು ಇರಲಿದೆ. ತಪಾಸಣೆಗೆ ಬರುವವರು ಆಧಾರ್ ಕಾರ್ಡಿನೊಂದಿಗೆ ಹಾಜರಾಗಿ ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಬಂಟರ ಸಂಘದ ಪ್ರಕಟಣೆ ತಿಳಿಸಿದೆ.














