Coastal Bulletin

ಮಂಗಳೂರು :ಕೇರಳದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ತಲಪಾಡಿ ಸೇರಿದಂತೆ ಸಾರಡ್ಕ ಜಾಲ್ಲೂರು ಗಡಿಯಲ್ಲೂ ತಪಾಸಣೆ ಹೆಚ್ಚಿಸಲಾಗಿದೆ. ಕೇರಳದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಹೇಳಿದ್ದಾರೆ.

ರಾಜ್ಯ ಸರಕಾರದ ಸೂಚನೆ ಹಿನ್ನೆಲೆಯಲ್ಲಿ ಸ್ವತಃ ಜಿಲ್ಲಾಧಿಕಾರಿ ರಾಜೇಂದ್ರ ಅವರು ಇಂದು ತಲಪಾಡಿ ಗಡಿಯಲ್ಲಿ

ಪರಿಶೀಲನೆ ಕೈಗೊಂಡಿದ್ದಾರೆ.ಪೊಲೀಸರು 24 ಗಂಟೆ ಕಾಲ ಗಡಿಯಲ್ಲಿದ್ದು, ಒಳಬರುವ ಜನರನ್ನು ತಪಾಸಣೆಗೆ ಒಳಪಡಿಸುವಂತೆ ಸೂಚಿಸಿದ್ದಾರೆ.

Leave a Comment