ಬಂಟ್ವಾಳ :ಬಂಟ್ವಾಳ ತಾಲೂಕಿನಲ್ಲಿ ನಡೆಯುವ 18 ವರ್ಷ ಮೇಲ್ಪಟ್ಟ ಕಾಲೇಜ್ ವಿದ್ಯಾರ್ಥಿಗಳಿಗೆ ಮೆಗಾ ವ್ಯಾಕ್ಸಿನೇಷನ್ ಅಭಿಯಾನಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಎಸ್.ವಿ.ಎಸ್ ಕಾಲೇಜ್ ನಲ್ಲಿ ಚಾಲನೆ ನೀಡಿದರು.
ಬಂಟ್ವಾಳ ತಾಲೂಕಿನ ಆಯಾಯ ಕಾಲೇಜಿನ ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಷನ್ ನೀಡುವ ವ್ಯವಸ್ಥೆ ಯನ್ನು ಆರೋಗ್ಯ ಇಲಾಖೆಯ ವತಿಯಿಂದ ಮಾಡಲಾಗಿದ್ದು ಒಟ್ಟು 5350 ಡೋಸ್ ಗಳು ಇಂದು ವಿದ್ಯಾರ್ಥಿಗಳಿಗೆ ಲಭ್ಯವಿದೆ.ಯಾರು ಕೂಡ ಆತಂಕ ಪಡುವುದು ಬೇಡ,ಗೊಂದಲ ಗಳಿಗೆ ತಲೆಕೆಡಿಸಿಕೊಳ್ಳಬೇಡಿ ಎಂದ ಅವರು ತಾಲೂಕಿನ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಮೂಲಕ ಕೊರೊನಾದಿಂದ ಮುಕ್ತಿ ಪಡೆಯಲು ಪ್ರಯತ್ನ
ಮಾಡಲಾಗುತ್ತಿದೆ ಎಂದರು.ಲಸಿಕೆಯಿಂದ ಮಾತ್ರ ಕೊರೊನಾದಿಂದ ಪಾರಾಗಲು ಸಾಧ್ಯ , ಹಾಗಾಗಿ ಪ್ರತಿಯೊಬ್ಬರು ಲಸಿಕೆ ಪಡೆಯಿರಿ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ್ ರಶ್ಮಿ ಎಸ್. ಆರ್, ತಾಲೂಕು ಆರೋಗ್ಯ ಅಧಿಕಾರಿ ಡಾ! ದೀಪ ಪ್ರಭು, ತೋಟಗಾರಿಕೆ ಇಲಾಖೆ ಅಧಿಕಾರಿ ಪ್ರದೀಪ್ ಡಿ.ಸೋಜ, ಕಾಲೇಜು ಪ್ರಾಂಶುಪಾಲ ಡಾ! ಪಾಂಡುರಂಗ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
















