ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆಯ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ ಧಾರ್ಮಿಕ ಮುಂದಾಳು ರಾಜೇಶ್ ಕುಲಾಲ್ ಕುಕ್ಕಾಜೆ ( 44) ಅವರು ಜ್ವರದಿಂದ ನಿಧನರಾಗಿದ್ದಾರೆ.
ಅವರು ಕೆಲದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಜೂನ್ 25 ರಂದು ಬುಧವಾರ ಮಂಗಳೂರು ಕೆ.ಎಂ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಐಸಿಯು ಘಟಕದಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ
ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ರಾಜೇಶ್ ಕುಲಾಲ್ ಅವರು ಕುಕ್ಕಾಜೆ ಯುವಕ ಮಂಡಲದ ,ಸಿದ್ದಿವಿನಾಯಕ ಮಂದಿರ ಕುಕ್ಕಾಜೆ ಇಲ್ಲಿನ ಸಕ್ರೀಯಾಗಿದ್ದರು.ಇದರ ಕುಕ್ಕಾಜೆ ಬಿಜೆಪಿ ಬೂತ್ ಸಮಿತಿ ಸದಸ್ಯರಾಗಿದ್ದರು. ಧಾರ್ಮಿಕ ,ಸಾಮಾಜಿಕವಾಗಿ ಸಕ್ರಿಯರಾಗಿದ್ದ ಇವರು ಬಿಸ್ಕೆಟ್ ಕಂಪೆನಿಯೊಂದರಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.
ಇವರಿಗೆ ಇಬ್ಬರು ಸಣ್ಣ ಹೆಣ್ಣು ಮಕ್ಕಳಿದ್ದಾರೆ. ತಾಯಿ, ಪತ್ನಿ, ತಂಗಿಯನ್ನು ಅಗಲಿದ್ದಾರೆ.















