ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಸಹಕಾರದೊಂದಿಗೆ ತಾಲೂಕಿನ ಪುದು ಗ್ರಾಮದ ಫರಂಗಿಪೇಟೆ ಬಸ್ ನಿಲ್ದಾಣದ ಬಳಿ ಹಾಗೂ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಅಂಗನವಾಡಿ ಕೇಂದ್ರದಲ್ಲಿ ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಮೂಲಕ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ರವರು ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯಾದ ಲಕ್ಷ್ಮಿ
ಡಿ ಶೆಟ್ಟಿ, ವೀಣಾ,ಶೋಭಾ ಪಿ, ಅಂಗನವಾಡಿ ಕಾರ್ಯಕರ್ತೆಯರಾದ ಲಿಲ್ಲಿ ಡಿಸೋಜಾ ಮತ್ತು ಚೈತ್ರ, ಜಗದೀಶ ನೆತ್ತರಕೆರೆ ಉಪಸ್ಥಿತರಿದ್ದರು.















