ಮಂಗಳೂರು:ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್‌ಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೋಲೀಸರು ಬಂಧಿಸಿದ್ದಾರೆ.ಇನ್‌ಲ್ಯಾಂಡ್ ಅಪಾರ್ಟ್‌ಮೆಂಟ್ ನಿವಾಸಿ ಅಝ್ವೀನ್ ಸಿ.(24) ಹಾಗೂ ಬೈಕಂಪಾಡಿ ಜೋಕಟ್ಟೆಯ ಕೆಬಿಎಸ್ ಬೊಟ್ಟು ಹೌಸ್ ನಿವಾಸಿ ಹತೀಜಮ್ಮ ಅಲಿಯಾಸ್ ಸಫ್ನಾ (23) ಬಂಧಿತ ಆರೋಪಿಗಳು.
ಉಳ್ಳಾಲದ ಇನ್‌ಲ್ಯಾಂಡ್ ಇಂಫಾಲ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಮಹಿಳೆ ಮತ್ತು ಆಕೆಯ ಸ್ನೇಹಿತ ಪಕ್ಕದ ಮನೆಯ ವ್ಯಕ್ತಿಯೊಬ್ಬರಿಗೆ ಪಾರ್ಟಿಯ ನೆಪದಲ್ಲಿ ಮದ್ಯದ ಜತೆ ಅಮಲು
ಪದಾರ್ಥ ಬೆರೆಸಿ ಕುಡಿಸಿ ಅವರನ್ನು ವಿವಸ್ತ್ರಗೊಳಿಸಿ ವೀಡಿಯೊ ಮಾಡಿ ಹನಿಟ್ರ್ಯಾಪ್‌ಗೆ ಒಳಪಡಿಸಿರುವ ಬಗ್ಗೆ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು
Advertisement