ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 4 ತಾಲ್ಲೂಕುಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಾಟವನ್ನು ಶುಕ್ರವಾರ ಮಧ್ಯರಾತ್ರಿಯವರೆಗೆ ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಇಂದು ಆದೇಶ ನೀಡಿದ್ದಾರೆ.
ಜು. 29ರವರೆಗೆ ನಿಷೇದಾಜ್ಞೆಯೂ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ತಾಲ್ಲೂಕಿನಲ್ಲಿ ಮುಂದುವರಿದಿದ್ದು, 5 ಕ್ಕಿಂದ ಹೆಚ್ಚು ಜನ ಸೇರುವ ಹಾಗಿಲ್ಲ,
ಸಭೆ, ಸಮಾರಂಭ ಎಲ್ಲಾ ನಿಷೇಧ ಹೇರಳಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಆರೋಪಿಗಳನ್ನು ಬಂಧಿಸಲಾಗಿದೆ. ವಶಕ್ಕೆ ಪಡೆದವರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ.
















