ಬಿ ಸಿ ರೋಡ್ :ಶ್ರೀ ಸಾಯಿ ಕಿಡ್‌ಜೋನ್ ವಿದ್ಯಾ ಸಂಸ್ಥೆಯಲ್ಲಿ ಆಟಿದ ಕೂಟ ಸಂಭ್ರಮ.

Coastal Bulletin
ಬಿ ಸಿ ರೋಡ್ :ಶ್ರೀ ಸಾಯಿ ಕಿಡ್‌ಜೋನ್ ವಿದ್ಯಾ ಸಂಸ್ಥೆಯಲ್ಲಿ ಆಟಿದ ಕೂಟ ಸಂಭ್ರಮ.

ಬಂಟ್ವಾಳ :ಬಿ.ಸಿ.ರೋಡ್‌ನ ಶ್ರೀ ಸಾಯಿ ಕಿಡ್‌ಜೋನ್ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಹಾಗೂ ಸಂಸ್ಥೆಯ ರಕ್ಷಕ-ಶಿಕ್ಷಕ ಸಂಘದ ಸಹಯೋಗದೊಂದಿಗೆ ಶಾಲೆಯಲ್ಲಿ ಸಾಂಪ್ರದಾಯಿಕ ಆಟಿದ ಕೂಟ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ತುಳು ನಿರೂಪಕರಾದ  ದಿನೇಶ್ ಸುವರ್ಣ ರಾಯಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ, ಆಟಿ ತಿಂಗಳ ಮಹತ್ವ, ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷರಾದ  ರವಿಚಂದ್ರ ಬಂಟ್ವಾಳ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ  ವೀಕ್ಷಾ ನಿಶಾಂತ್, ಉಪಾಧ್ಯಕ್ಷ   ಜಿತೇಶ್ ಎನ್., ಖಜಾಂಚಿ ಗಾಯತ್ರಿ, ನಿಕಟ ಪೂರ್ವ ಅಧ್ಯಕ್ಷೆ  ತೇಜಸ್ವಿನಿ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ  ಆರತಿ ಅಮೀನ್ , ಹಾಗೂ ಆಶ್ರಿತ್ ಅಮೀನ್ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ  ಐತಪ್ಪ

ಪೂಜಾರಿ ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ಮಕ್ಕಳಿಗೆ ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಮತ್ತು ಆಚರಣೆಗಳನ್ನು ಬಾಲ್ಯದಿಂದಲೇ ಪರಿಚಯಿಸುವ ಅಗತ್ಯವನ್ನು ಒತ್ತಿಹೇಳಿದರು.

ಶಿಕ್ಷಕಿ ಮಮತಾ ಅವರು ಅತಿಥಿಗಳನ್ನು ಸ್ವಾಗತಿಸಿದರು.  ಪೂರ್ಣಿಮಾ ಕಾರ್ಯಕ್ರಮವನ್ನು ನಿರೂಪಿಸಿ, ದಿವ್ಯಾ ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕಿಯರಾದ  ಪುಷ್ಪಲತಾ, ಗೀತಾ ಹಾಗೂ ಅಂಬಿಕಾ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

ಈ ಸಂದರ್ಭದಲ್ಲಿ ಪೋಷಕರು ಆಟಿ ತಿಂಗಳ ವಿಶೇಷವಾದ ಸುಮಾರು 48 ಬಗೆಯ ಸಾಂಪ್ರದಾಯಿಕ ತಿಂಡಿ-ತಿನಿಸುಗಳನ್ನು ತಯಾರಿಸಿ ತಂದು ಪ್ರದರ್ಶಿಸಿದರು. ಬಳಿಕ ನಡೆದ ಸಹಭೋಜನದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಿದರು.

Leave a Comment