ಬಂಟ್ವಾಳ :ತಾಲೂಕಿನ ತುಂಬೆ ಗ್ರಾಮದ ಮಜಿ ಎಂಬಲ್ಲಿ ಯುವಶಕ್ತಿ ಸಂಘಟನೆಯ ಅಶ್ರಯದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.
ಈ ಸಂದರ್ಭದಲ್ಲಿ ಮಜಿ ಸುತ್ತಮುತ್ತಲಿನ ಪರಿಸರದ ಗದ್ದೆ, ರಸ್ತೆ ಬದಿಯ ಇಕ್ಕೆಲಗಳಲ್ಲಿ ಕಸ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ, ಹುಲ್ಲುಗಳನ್ನು ಕತ್ತರಿಸಿ ಸ್ವಚ್ಛ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವಶಕ್ತಿ
ಮಜಿ ಸಂಘದ ಅಧ್ಯಕ್ಷ ರಂಜಿತ್ ಕುಲಾಲ್, ಉಪಾಧ್ಯಕ್ಷ ರಮೇಶ್, ಕಾರ್ಯದರ್ಶಿ ಸನತ್ ಕುಮಾರ್, ಕೋಶಾಧಿಕಾರಿ ಶರುಣ್ ಸಹಿತ ಸಂಘ ಎಲ್ಲಾ ಸದಸ್ಯರು ಹಾಗೂ ಸ್ಥಳೀಯರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು
















