ಬಂಟ್ವಾಳ ‌ಬ್ಲಾಕ್ ಕಾಂಗ್ರೆಸ್ ನ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ.

Coastal Bulletin
ಬಂಟ್ವಾಳ ‌ಬ್ಲಾಕ್ ಕಾಂಗ್ರೆಸ್ ನ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ.

ಬಂಟ್ವಾಳ: ಚುನಾವಣೆಯಲ್ಲಿ ಸೋಲು ಗೆಲುವು ಅದು ನಿಶ್ಚಿತ, ಆದರೆ ಪ್ರಾಮಾಣಿಕ ಕೆಲಸ ಮಾಡಿ . ದ.ಕ.ಜಿಲ್ಲೆಯ ನಿಷ್ಠಾವಂತ ಕಾರ್ಯಕರ್ತರೇ ಕಾಂಗ್ರೆಸ್ ನ ಶಕ್ತಿ, ಕಾಂಗ್ರೆಸ್ ಪಕ್ಷ ಕುಟುಂಬವಿದ್ದಂತೆ, ಜಿಲ್ಲೆಯಲ್ಲಿ ಇಚ್ಚಾಶಕ್ತಿಯಿಂದ ಮುಖಂಡರು ಕಾರ್ಯಕರ್ತರು ಕೆಲಸ ಮಾಡಿದರೆ ಮತ್ತೆ ಕಾಂಗ್ರೇಸ್ ನ ಕೈಗೆ ಅಧಿಕಾರ ಪಡೆಯುವುದು ನಿಶ್ಚಿತ, ನೂತನ ಪದಾಧಿಕಾರಿಗಳು ಹೊಂದಾಣಿಕೆಯಿಂದ ಪಕ್ಷ ಸಂಘಟನೆ ಮಾಡಬೇಕಾಗಿದೆ. ನೀಡಿದ ಜವಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು.

ಅವರು ಪಾಣೆಮಂಗಳೂರು ಸಾಗರ್ ಅಡಿಟೋರಿಯಂ ಹಾಲ್ ನಲ್ಲಿ ನಡೆದ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಮತ್ತು ಎನ್.ಎಸ್.ಯು.ಐ.ನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪ್ರಮುಖ ಹುದ್ದೆಯಾಗಿದ್ದು, ಇವರು ಪಕ್ಷದ ಜೀವಾಳ ಎಂದು ತಿಳಿಸಿದರು. ಕಾಂಗ್ರೆಸ್ ನ ಎಲ್ಲಾ ಮುಂಚೂಣಿಯ ಘಟಕಗಳು ಹೊಂದಾಣಿಕೆಯಿಂದ ಒಗ್ಗಟ್ಟಾಗಿ ಕೆಲಸ ಮಾಡಿದಾಗ ಬ್ಲಾಕ್ ಕಾಂಗ್ರೆಸ್ ನ್ನು ಬಲಪಡಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿದಾಗ ಪಕ್ಷದ ಕಾರ್ಯಕರ್ತರು ಶಕ್ತಿಯನ್ನು ಹೊಂದಲು ಅವಕಾಶ ಸಿಗುತ್ತದೆ‌. ರಾಹುಲ್ ಗಾಂಧಿಯವರು ಮತ್ತೊಮ್ಮೆ ‌ಕಾಂಗ್ರೇಸ್ ಪಕ್ಷವನ್ನು ಬಲಿಷ್ಠಗೊಳಿಸಲು ಮುಂದಾಗಿದ್ದು, ನಾವೆಲ್ಲರೂ ಜೊತೆಯಾಗಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ನತ್ತ ಜನ

ಆಕರ್ಷಿಸಿತಾರಗಿದ್ದು , ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ಗೆ ಉಳಿಗಾಲವಿಲ್ಲ ಎಂಬ ಹೆದರಿಕೆಯಿಂದ ಜನಪ್ರಿಯ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಆರೋಪ ಮಾಡಿದರು. ಮುಂದಿನ ಎಲ್ಲಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆದ್ದು ಬರುತ್ತಾರೆ ಎಂದು ತಿಳಿಸಿದರು.

ಪ್ರಮುಖರಾದ ಪದ್ಮರಾಜ್ ಆರ್‌‌.ಪೂಜಾರಿ, ಜಿ.ಎ.ಬಾವ, ವಾಸುಪೂಜಾರಿ, ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್.ರೋಡ್ರಿಗಸ್, ಬಿ.ಎಚ್.ಖಾದರ್, ಪದ್ಮಶೇಖರ್ ಜೈನ್, ಅಬ್ಬಾಸ್ ಆಲಿ, ಮೋಹನ್ ಗೌಡ ಕಲ್ಮಂಜ, ಪದ್ಮನಾಭ ರೈ, ಸುಭಾಶ್ಚಂದ್ರ ಶೆಟ್ಟಿ, ಸುಹಾನ್ ಆಳ್ವ , ಜಯಂತಿ ಆರ್.ಪೂಜಾರಿ, ಚಿತ್ತರಂಜನ್ ಶೆಟ್ಟಿ ಬೊಂಡಲ , ವಿಲ್ಮಾ ಮೋರಾಸ್, ಸುರೇಶ್ ಜೋರಾ, ಬೇಬಿ ಕುಂದರ್, ಇಬ್ರಾಹಿಂ ನವಾಜ್, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್,ಸುದರ್ಶನ ಜೈನ್ , ಮಹಮ್ಮದ್ ಸಪ್ವಾನ್, ಮತ್ತಿತರರು ಉಪಸ್ಥಿತರಿದ್ದರು.ಸುದೀಪ್ ಶೆಟ್ಟಿ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿದರು.

Leave a Comment