ಫರಂಗಿಪೇಟೆ: ಗಣೇಶೋತ್ಸವಕ್ಕೆ ಹಾಕಿದ್ದ ಬ್ಯಾನರ್ ಹರಿದ ಆರೋಪಿಯ ಬಂಧನ.

Coastal Bulletin
ಫರಂಗಿಪೇಟೆ: ಗಣೇಶೋತ್ಸವಕ್ಕೆ ಹಾಕಿದ್ದ ಬ್ಯಾನರ್ ಹರಿದ ಆರೋಪಿಯ ಬಂಧನ.

ಬಂಟ್ವಾಳ: ಫರಂಗಿಪೇಟೆಯ ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಹಾಕಿದ್ದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫರಂಗಿಪೇಟೆಯ ನಿವಾಸಿ ಹೈದರ್ ಎಂದು ಗುರುತಿಸಲಾಗಿದೆ.

ಬಂಟ್ವಾಳ ಫರಂಗಿಪೇಟೆ ನಿವಾಸಿ ಚಂದ್ರಶೇಖರ್ ಆಳ್ವ ಎನ್ನುವವರು ಪರಂಗಿಪೇಟೆ ಸೇವಾಂಜಲಿ ಭವನದಲ್ಲಿ ನಡೆಯುತ್ತಿರುವ ಗಣೇಶೋತ್ಸವ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರನ್ನು, ಅಗತ್ಯ ಇಲಾಖೆಯಿಂದ ಪೂರ್ವಾನುಮತಿ ಪಡೆದು, ಆ.25. ರಂದು ರೂ 3,500 ವೆಚ್ಚದಲ್ಲಿ ಪರಂಗಿಪೇಟೆಯ ಕುಂಪಣ ಮಜಲು ಕ್ರಾಸ್ ಬಳಿ ಬ್ಯಾನರ್ ಅಳವಡಿಸಿರುತ್ತಾರೆ.

 ಆ 27 ರಂದು ರಾತ್ರಿ ವೇಳೆ ಫರಂಗಿಪೇಟೆಯ ನಿವಾಸಿ ಹೈದರ್ ಎಂಬಾತನು ಬ್ಯಾನರನ್ನು ಹರಿದು ಹಾಕಿದ್ದಾನೆ.

ಈ ಕೃತ್ಯದಿಂದಾಗಿ ಸಾರ್ವಜನಿಕರು ಪ್ರಚೋದನೆಗೊಂಡು ಗಲಭೆ ಏಳಬಹುದೆಂದು ತಿಳಿದಿದ್ದರೂ ಕೂಡಾ, ಉದ್ದೇಶಪೂರ್ವಕವಾಗಿ ಕೃತ್ಯ ನಡೆಸಿ ಸಾರ್ವಜನಿಕ ವಲಯದಲ್ಲಿ ಭೀತಿಯನ್ನುಂಟು ಮಾಡಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ:129/2025, ಕಲಂ: 299,192,353 (1), (b),57,324(4) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.ಆರೋಪಿ ಹೈದರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Leave a Comment