ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಕೌಡೋಡಿಗುತ್ತು ನಿವಾಸಿ, ಹಿರಿಯ ಗುರಿಕಾರ ಕೌಡೋಡಿ ಬಾಬು ಪೂಜಾರಿ(82)ಇವರು ಅಸೌಖ್ಯದಿಂದ ಸೋಮವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ.
ಪ್ರಗತಿಪರ ಕೃಷಿಕರಾಗಿ, ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ, ವಾಮದಪದವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ, ಕೊರಂಟಬೆಟ್ಟುಗುತ್ತು
ಶ್ರೀ ಬ್ರಹ್ಮಬೈದರ್ಕಳ ಕ್ಷೇತ್ರದ ಗೌರವಾಧ್ಯಕ್ಷರಾಗಿ ವಿವಿಧ ಸಾಮಾಜಿಕ, ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.
ನಿವೃತ್ತ ಅಂಚೆ ಅಧಿಕಾರಿಯಾಗಿ, ಬಿಲ್ಲವ ಸಮುದಾಯ ಮತ್ತು ಕಾಂಗ್ರೆಸ್ ಹಿರಿಯ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ ಅಂತಿಮ ನಮನ ಸಲ್ಲಿಸಿದರು.














