ಪಾವೂರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ. ಜೀರ್ಣೋದ್ಧಾರ ಕಾರ್ಯದ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ.

Coastal Bulletin
ಪಾವೂರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ. ಜೀರ್ಣೋದ್ಧಾರ ಕಾರ್ಯದ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ.

ಬಂಟ್ವಾಳ :ಪಾವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಯಶಸ್ವಿಯಾಗಿ ನೆರವೇರಬೇಕು ಹಾಗೂ ಶ್ರೀ ದೇವಿಯ ಅನುಗ್ರಹ ಸದಾ ಇರಬೇಕು ಎಂಬ ಸಂಕಲ್ಪದೊಂದಿಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು.

ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಭಕ್ತರು ಹಾಗೂ ದಾನಿಗಳು ನೀಡುತ್ತಿರುವ ಸಹಕಾರ ಮುಂದುವರಿಯಬೇಕು, ಯಾವುದೇ ಗೊಂದಲಕ್ಕೆ ಅವಕಾಶವಾಗದಂತೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಹಾಗೂ ಬ್ರಹ್ಮಕಲಶೋತ್ಸವವನ್ನು ಯಶಸ್ವಿಯಾಗಿ ನೆರವೇರಿಸಬೇಕು ಎಂಬ ಆಶಯದೊಂದಿಗೆ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಸ್ಥರು, ಬೀಡು ಮತ್ತು ಕೊಪ್ಪರಿಗೆ ಮನೆತನದವರು, ದೇವಸ್ಥಾನದ ಅರ್ಚಕ ಮನೆತನ ದೇವಸ್ಥಾನದ ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಮಹಿಳಾ ಸಮಿತಿಯ ಪ್ರಮುಖರು ಮತ್ತು ಭಕ್ತರು ಉಪಸ್ಥಿತರಿದ್ದರು.

ಇನೋಳಿ ಬೀಡುಮನೆಯಲ್ಲಿರುವ ಮಲರಾಯ ಚಾವಡಿಯಲ್ಲಿ.ಇದಾದ ಬಳಿಕ ಇನೋಳಿ

,  ಬೀಡು ವ್ಯಾಪ್ತಿಯಲ್ಲಿ ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ಕೋರ್ದಬ್ಬು ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು.

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸುಸೂತ್ರವಾಗಿ ನಡೆಯಬೇಕು, ಗ್ರಾಮದ ದೈವ-ದೇವರುಗಳ ಅನುಗ್ರಹದಿಂದ ಯಾವುದೇ ಅಡೆತಡೆಗಳು ಎದುರಾಗದಿರಬೇಕು ಹಾಗೂ ಬ್ರಹ್ಮಕಲಶೋತ್ಸವವು ಯಶಸ್ವಿಯಾಗಿ ನೆರವೇರಬೇಕು ಎಂಬ ಸಂಕಲ್ಪದೊಂದಿಗೆ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ದೇವಸ್ಥಾನದ ಕಾರ್ಯವು ಗ್ರಾಮದ ಎಲ್ಲರ ಕಾರ್ಯವಾಗಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಪರಸ್ಪರ ಚರ್ಚೆಯ ಮೂಲಕ ಸೌಹಾರ್ದಯುತವಾಗಿ ಪರಿಹರಿಸಿಕೊಂಡು, ಧಾರ್ಮಿಕ ಕಾರ್ಯಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸುವಂತೆ ಮನವಿ ಮಾಡಲಾಯಿತು.

Leave a Comment